Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಾವು ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದೇವೆ: ಡಿಕೆಶಿ
  • Politics
  • State
  • ದಾವಣಗೆರೆ

ನಾವು ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದೇವೆ: ಡಿಕೆಶಿ

Praja Vahini March 31, 2026 1 minute read
WhatsApp Image 2026-03-31 at 16.23.45
Spread the love

ದಾವಣಗೆರೆ: ನಾವು ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದು, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ಕಾಂಗ್ರೆಸ್ ಪಕ್ಷ ಎಲ್ಲಾ ಸಮಾಜ, ಎಲ್ಲಾ ವರ್ಗಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತಿದೆ. ಶಾಮನೂರು ಶಿವಶಂಕರಪ್ಪ ಅವರು ರಾಷ್ಟ್ರೀಯ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿದ್ದವರು. ಅವರ ಕೊಡುಗೆ ಅಪಾರವಾಗಿದೆ. ನಾನು ಇಲ್ಲಿ ಪ್ರತ್ಯೇಕ ಸಮೀಕ್ಷೆ ಮಾಡಿಸಿದ್ದು, ಕೋವಿಡ್ ಸಮಯದಲ್ಲಿ ಶಾಮನೂರು ಶಿವಶಂಕರಪ್ಪನವರು ಮಾಡಿದ ಸಹಾಯ, ಸಹಕಾರವನ್ನು ಜನ ಸ್ಮರಿಸುತ್ತಿದ್ದಾರೆ. ವಿದ್ಯಾ ಕ್ಷೇತ್ರದಲ್ಲಿ ಅವರು ನೀಡಿರುವ ಸೇವೆಯನ್ನು ನೆನೆಯುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ದಾವಣಗೆರೆಯಲ್ಲಿ ಇಂದು (ಮಂಗಳವಾರ ಮಾರ್ಚ್ 31) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಿವಂಗತ ಶಾಮನೂರು ಶಿವಶಂಕರಪ್ಪನವರು ಮಾಡಿರುವ ಸೇವೆ, ಕೊಟ್ಟಿರುವ ಕೊಡುಗೆಗಳನ್ನು ಈ ಭಾಗದ ಜನ ಸ್ಮರಿಸುತ್ತಿದ್ದಾರೆ. ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ ಅವರು ದೊಡ್ಡ ಅಂತರದ ಗೆಲುವು ಸಾಧಿಸಲಿದ್ದಾರೆ  ಎಂದು ಹೇಳಿದರು.

ನಮ್ಮ ಮುಖ್ಯಮಂತ್ರಿಗಳು ಈಗಾಗಲೇ ಉಪಚುನಾವಣೆ ಕ್ಷೇತ್ರಗಳಲ್ಲಿ ಪ್ರಚಾರ ಆರಂಭಿಸಿದ್ದಾರೆ. ನಮ್ಮ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಪಕ್ಷ ಯಾರಿಗೆ ಎಲ್ಲಿ ಪ್ರಚಾರ ಮಾಡಲು ಜವಾಬ್ದಾರಿ ನಿಡಿದೆಯೋ ಆಯಾ ನಾಯಕರು ಅಲ್ಲಿ ಪ್ರಚಾರನಿರತರಾಗಿದ್ದಾರೆ. ನಾನು ಅಸ್ಸಾಂನಲ್ಲಿ ಎರಡು ದಿನ ಪ್ರಚಾರ ಮುಗಿಸಿ ಇಲ್ಲಿಗೆ ಬಂದಿದ್ದೇನೆ. ಇಂದು ದಾವಣಗೆರೆ, ನಾಳೆ ಬಾಗಲಕೋಟೆಯಲ್ಲಿ ಪ್ರಚಾರ ಮಾಡುತ್ತೇವೆ. ನಂತರ ಮತ್ತೆ ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ಪ್ರಚಾರ ಮಾಡುತ್ತೇವೆ. ಈ ಮಧ್ಯೆ ಎರಡು ದಿನ ಕೇರಳಕ್ಕೆ ಹಾಗೂ ಒಂದು ದಿನ ಅಸ್ಸಾಂಗೆ ಹೋಗಿ ಪ್ರಚಾರ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಹತ್ತಳ್ಳಿ ಬೋರಿ ಹಳ್ಳದಲ್ಲಿ ಪ್ರಾಣಿ, ಪಕ್ಷಿಗಳ ಮಾರಣ ಹೋಮ: ಜನರಲ್ಲಿ ಆತಂಕ

ಸಾವಿರಾರು ಜನ ಹೊರಗಡೆಯಿಂದ ಬಂದು ಇಲ್ಲಿ ಶಿಕ್ಷಣ ಪಡೆಯುವಂತೆ ಮಾಡಿರುವವರು ಶಿವಶಂಕರಪ್ಪನವರು. ಅವರಿಂದ ಈ ಜಿಲ್ಲೆ ಪ್ರಸಿದ್ಧವಾಗಿದೆ. ಅವರ ಕುಟುಂಬಕ್ಕೆ ಶಕ್ತಿ ತುಂಬಲು ಜನ ತೀರ್ಮಾನಿಸಿದ್ದಾರೆ. 79% ಜನ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮಾಡುವುದಾಗಿ ಹೇಳಿದ್ದು, ಇದು ಬಹಳ ಸಂತೋಷದ ವಿಚಾರ. ನಮ್ಮ ಗ್ಯಾರಂಟಿಗಳು ಕ್ಷೇತ್ರದ ಮನೆ ಮನೆಗೂ ತಲುಪಿವೆ. 59 ಸಾವಿರ ಬಡ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ತಲುಪುತ್ತಿದೆ. 1.40 ಲಕ್ಷ ಜನರಿಗೆ ಅನ್ನ ಭಾಗ್ಯ ಯೋಜನೆ, 59 ಸಾವಿರ ಮನೆಗಳಿಗೆ ಉಚಿತ ವಿದ್ಯುತ್ ಸಿಗುತ್ತಿದೆ. ಮಹಿಳೆಯರು ಬಸ್ ನಲ್ಲಿ ಉಚಿತ ಪ್ರಯಾಣ ಮಾಡುತ್ತಿದ್ದಾರೆ ಎಂದು ವಿವರಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಹತ್ತಳ್ಳಿ ಬೋರಿ ಹಳ್ಳದಲ್ಲಿ ಪ್ರಾಣಿ, ಪಕ್ಷಿಗಳ ಮಾರಣ ಹೋಮ: ಜನರಲ್ಲಿ ಆತಂಕ
Next: ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ: ಸಿಎಂ

Views:

37

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.