ದಾವಣಗೆರೆ: ರಾಜ್ಯ ರಾಜಕೀಯದಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಜೋರಾಗಿ ಏರುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಪಕ್ಷದ ಅಭ್ಯರ್ಥಿ ಗೆಲುವಿನ ಪರವಾಗಿ ಹಗಲು-ರಾತ್ರಿ ಮತ ಪ್ರಚಾರದಲ್ಲಿ ತೊಡಗಿದ್ದಾರೆ.
ಹೌದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದಾವಣಗೆರೆಯ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯ ಪರವಾಗಿ ಮತ ಪ್ರಚಾರ ಕೈಗೊಂಡಿದ್ದು, ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ.
ಇನ್ನು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ, ನಿನ್ನೆ (ಗುರುವಾರ ಏ. 02) ತಡರಾತ್ರಿ ಬೂತ್ ಮಟ್ಟದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರೊಂದಿಗೆ ಚುನಾವಣಾ ಪ್ರಚಾರ ಮತ್ತು ತಂತ್ರಗಾರಿಕೆಯ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಇದನ್ನೂ ಓದಿ: ನನ್ನ ವಿರುದ್ಧ ರಾಜಕೀಯದಲ್ಲಿ ಹಲವರು ಕುತಂತ್ರ ನಡೆಸುತ್ತಿದ್ದಾರೆ: ದಳಪತಿ ವಿಜಯ್
ಮಧ್ಯರಾತ್ರಿಯಾದರೂ ಕಿಂಚಿತ್ತೂ ದಣಿಯದೆ, ಅತ್ಯಂತ ಉತ್ಸಾಹದಿಂದ ಪಕ್ಷದ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಬದ್ಧತೆ ಕಂಡು ಹೆಮ್ಮೆಯೆನಿಸಿತು. “ಬೂತ್ ಗೆದ್ದರೆ, ರಾಜ್ಯ ಗೆದ್ದಂತೆ” ಎಂಬ ಮಾತಿಗೆ ಪೂರಕವಾಗಿ ಕೆಲಸ ಮಾಡುತ್ತಿರುವ ನಮ್ಮ ಕೈ ಪಡೆಯ ಶ್ರಮವೇ ಅಭ್ಯರ್ಥಿಯ ಗೆಲುವಿಗೆ ಶ್ರೀರಕ್ಷೆ. ಕಾರ್ಯಕರ್ತರ ಈ ಒಗ್ಗಟ್ಟು ಮತ್ತು ಸಂಘಟನಾ ಶಕ್ತಿ ವಿಜಯದ ಸಂಕೇತವಾಗಿದೆ ಎಂದು ಹೇಳಿದರು.
