ಬಾಗಲಕೋಟೆ: ರಾಜ್ಯ ರಾಜಕೀಯದಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಒಂದು ಕಡೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಭರ್ಜರಿ ಮತ ಪ್ರಚಾರದಲ್ಲಿ ತೊಡಗಿದ್ದರೆ, ಮತ್ತೊಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿನ ಕುರಿತಾಗಿ ಭರ್ಜರಿ ಮತ ಪ್ರಚಾರದಲ್ಲಿ ತೊಡಗಿರುವುದರ ಜೊತೆಗೆ ಅಭ್ಯರ್ಥಿ ಗೆಲುವಿನ ಕುರಿತಾಗಿ ವಿವಿಧ ದೇವಾಲಯಗಳ ಮೊರೆ ಹೋಗುತ್ತಿದ್ದಾರೆ.
ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಚುನಾವಣೆಯಲ್ಲಿ ಶತಾಯಗತಯ ಹೇಗಾದರೂ ಮಾಡಿ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವ ನಿಟ್ಟಿನಲ್ಲಿ ದೇವರುಗಳ ಮೊರೆ ಹೋಗುತ್ತಿದ್ದಾರೆ. ಇದನ್ನೂ ಓದಿ: ನಮ್ಮ ಕೈ ಪಡೆಯ ಶ್ರಮವೇ ಅಭ್ಯರ್ಥಿಯ ಗೆಲುವಿಗೆ ಶ್ರೀರಕ್ಷೆ: ಡಿಕೆಶಿ
ನಿನ್ನೆ (ಗುರುವಾರ ಏ. 02) ಬೆಂಗಳೂರಿನ ಶಿವಾಜಿನಗರದಲ್ಲಿರುವ ಹಜರತ್ ಖಡಕ್ ಶಾ ವಲಿ ದರ್ಗಾಗೆ ಭೇಟಿ ಪ್ರಾರ್ಥನೆ ಸಲ್ಲಿಸಿದ ಅವರು ಇಂದು (ಶುಕ್ರವಾರ ಏಪ್ರಿಲ್ 03) ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಮುಂಚಖಂಡಿ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿನೀಡಿ, ವಿಶೇಷ ಪೂಜೆ ಸಲ್ಲಿಸಿ, ನಾಡಿನ ಸಮಸ್ತ ಜನರ ಕಲ್ಯಾಣಕ್ಕಾಗಿ ಪ್ರಾರ್ಥಿಸಿದ್ದಾರೆ.
