ಬೆಂಗಳೂರು: ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾದ
ಶ್ರೀ ಬಸಣ್ಣ ಭಜಂತ್ರಿ ಪೋಲಿಸ್ ನಿರೀಕ್ಷಕರು ಪ್ರಸ್ತುತ ಕರ್ನಾಟಕ ರಾಜ್ಯ ಪೋಲಿಸ್ ಕ್ರೀಡಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಇವರಿಗೆ ಮಾನ್ಯಮುಖ್ಯಮಂತ್ರಿಗಳ ಪದಕವು ಅವರ ಪ್ರಾಮಾಣಿಕತೆಗೆ ಸಿಕ್ಕ ಪ್ರಶಸ್ತಿಯಾಗಿದೆ.
ರಾಯಚೂರು ಜಿಲ್ಲೆಯ ಸಾಮಾನ್ಯ ಗ್ರಾಮೀಣ ಹಿನ್ನೆಲೆಯಿಂದ ಬಂದ ಬಸಣ್ಣ ಭಜಂತ್ರಿ ಅವರು, ಕಷ್ಟದ ಹಾದಿಯಲ್ಲಿ ನಡೆದು ಬಂದು ಇಂದು ಪೊಲೀಸ್ ಇಲಾಖೆಯಲ್ಲಿ ಉನ್ನತ ಸ್ಥಾನಕ್ಕೇರಿದ್ದಾರೆ. ಅವರ ಈ ಯಶಸ್ಸು ಕೇವಲ ವೈಯಕ್ತಿಕ ಸಾಧನೆಯಲ್ಲ, ಬದಲಿಗೆ ರಾಯಚೂರಿನ ಸಾವಿರಾರು ಯುವಕರಿಗೆ ಸ್ಫೂರ್ತಿಯ ಸೆಲೆಯಾಗಿದೆ.
ಕರ್ನಾಟಕ ರಾಜ್ಯ ಪೊಲೀಸ್ ಕ್ರೀಡಾ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವಲ್ಲಿ ಮತ್ತು ಪೊಲೀಸ್ ತಂಡವನ್ನು ಕ್ರೀಡಾಕೂಟಗಳಲ್ಲಿ ಮುನ್ನಡೆಸುವಲ್ಲಿ ಪ್ರಮುಖ ಪಾತ್ರ,ಇವರ ಕರ್ತವ್ಯದಕ್ಷತೆ ಸದಾ ಮೇಲ್ಪಂಕ್ತಿಯಲ್ಲಿದೆ.
”ಬಸಣ್ಣ ಭಜಂತ್ರಿ ಅವರಿಗೆ ಸಂದ ಈ ಪದಕವು ಅವರ ವರ್ಷಗಳ ಶ್ರಮ, ನಿಸ್ವಾರ್ಥ ಸೇವೆ ಮತ್ತು ಇಲಾಖೆಯ ಮೇಲಿರುವ ನಿಷ್ಠೆಗೆ ಸಂದ ನ್ಯಾಯಯುತ ಗೌರವವಾಗಿದೆ.”
ಬೆಂಗಳೂರಿನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಪದಕ ಪ್ರದಾನ ಮಾಡಿ, ಮುಂದಿನ ದಿನಗಳಲ್ಲಿ ಇವರಿಂದ ಇನ್ನೂ ಹೆಚ್ಚಿನ ಸೇವೆ ನಾಡಿಗೆ ಲಭಿಸಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು ಅಭಿನಂದನೆಗಳು.
