ಕಲಬುರ್ಗಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗ ಅವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಮತ್ತು ಆರ್ಎಸ್ಎಸ್ ಕುರಿತು ಪ್ರಚೋದನಾಕಾರಿ ಭಾಷಣ ಮಾಡಿದ್ದನ್ನು ಖಂಡಿಸಿ ರಾಷ್ಟ್ರೀಯ ಏಕತೆ ಮತ್ತು ಸಮುದಾಯಗಳ ನಡುವಿನ ಗೌರವಕ್ಕೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಇಂದು ಬಿಜೆಪಿ ನಿಯೋಗವು ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ನಿಯೋಗದಲ್ಲಿ ಶಾಸಕರಾದ ಶ್ರೀ ಎಸ್. ಮುನಿರಾಜು, ಶ್ರೀ ಸಿ. ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಶ್ರೀ ಎಸ್. ಹರೀಶ್, ರಾಜ್ಯ ವಕ್ತಾರರಾದ ಶ್ರೀ ಪ್ರಕಾಶ್ ಎಸ್. ಮತ್ತು ಪ್ರಮುಖರು ಉಪಸ್ಥಿತರಿದ್ದರು.
