Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಾಂಗ್ರೆಸ್ ದೇಶಕ್ಕೆ ಮಾದರಿಯಾಗುವ ಯೋಜನೆ ಜಾರಿಗೆ ತಂದಿದ್ದೇವೆ: ಡಿಕೆಶಿ
  • Politics
  • State
  • ಬಾಗಲಕೋಟೆ

ಕಾಂಗ್ರೆಸ್ ದೇಶಕ್ಕೆ ಮಾದರಿಯಾಗುವ ಯೋಜನೆ ಜಾರಿಗೆ ತಂದಿದ್ದೇವೆ: ಡಿಕೆಶಿ

Praja Vahini April 7, 2026 1 minute read
Screenshot_2026-04-07-20-52-46-09_a23b203fd3aafc6dcb84e438dda678b6
Spread the love

ದಾವಣಗೆರೆ: ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ ದಾಳಿ ಮಾಡಿದ್ದು, ಇದಕ್ಕೆ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು.

ದಾವಣಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶಕ್ಕೆ ಮಾದರಿಯಾಗುವ ಯೋಜನೆ ಜಾರಿಗೆ ತಂದಿದ್ದೇವೆ. ಪ್ರಧಾನಮಂತ್ರಿಗಳು ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆ ಜಾರಿಯಾಗಿಲ್ಲ, ಕಾಂಗ್ರೆಸ್ ಕೊಟ್ಟ ಮಾತು ಉಳಿಸಿಕೊಂಡಿಲ್ಲ ಎಂದು ಹೇಳಿಕೆ ನೀಡಿದ್ದಾರೆ ಎಂದು ಕೇಳಿದೆ. ಅಷ್ಟು ದೊಡ್ಡ ಸ್ಥಾನದಲ್ಲಿರುವವರಿಗೆ ಈ ಬಗ್ಗೆ ಮಾಹಿತಿ ಇರುತ್ತದೆ ಎಂದು ಭಾವಿಸಿದ್ದೆ. ನಮ್ಮ ಕಾರ್ಯಕ್ರಮವನ್ನು ಟೀಕೆ ಮಾಡಿದ ಅವರೇ ಬೇರೆ ರಾಜ್ಯಗಳಲ್ಲಿ ನಮ್ಮ ಯೋಜನೆಗಳನ್ನು ನಕಲು ಮಾಡಿದ್ದಾರೆ ಎಂದು ತಿಳಿಸಿದರು.

ಈ ಪರಿಸ್ಥಿತಿಯಲ್ಲಿ ಬಿಜೆಪಿಯವರ ಮುಖವಾಡ ಕಳಚಿದೆ. ನಾವು ಯುವಕರಿಗೆ ಹಾಗೂ ಮಹಿಳೆಯರಿಗೆ ನೀಡುತ್ತಿರುವ ಕಾರ್ಯಕ್ರಮ ನಿಲ್ಲಿಸಲು ಮೊದಲಿನಿಂದಲೂ ದೊಡ್ಡ ಸಂಚು ರೂಪಿಸಿದ್ದಾರೆ. ನಮ್ಮ ಯೋಜನೆಗಳು ಈ ಚುನಾವಣೆಗೆ ಮಾಡಿರುವ ಯೋಜನೆಯಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಾರಿ ಮಾಡಿ ಕಳೆದ ಎರಡೂವರೆ ವರ್ಷದಲ್ಲಿ ಜನರಿಗಾಗಿ 1.25 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಿನಿಯೋಗಿಸಲಾಗಿದೆ. ಬಿಜೆಪಿಯವರ ಈ ಪತ್ರವು ಗ್ಯಾರಂಟಿ ಯೋಜನೆ ನಿಲ್ಲಿಸುವ ಷಡ್ಯಂತ್ರಕ್ಕೆ ಸಾಕ್ಷಿಯಾಗಿದೆ. ನಾವು ಕಾನೂನು ಅಡಿಯಲ್ಲಿ ಈ ಯೋಜನೆ ಹಣ ನೀಡುತ್ತಾ ಬಂದಿದ್ದೇವೆ. ಬಿಜೆಪಿಯ ಈ ನಡೆ, ಆಲೋಚನೆ ಖಂಡನೀಯ. ಬೆಲೆ ಏರಿಕೆಯಿಂದ ತೊಂದರೆ ಅನುಭವಿಸುತ್ತಿರುವ ಬಡವರ ರಕ್ಷಣೆಗೆ ಜಾರಿಗೆ ತಂದಿರುವ ಯೋಜನೆ ನಿಲ್ಲಿಸಲು ಬಿಜೆಪಿಗರು ಮುಂದಾಗಿದ್ದಾರೆ ಎಂದು ಹರಿಹಾಯ್ದರು.

ನಾನು ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದು, ಕಳೆದ ತಿಂಗಳವರೆಗಿನ ಕಂತನ್ನು ಬಿಡುಗಡೆ ಮಾಡಲಾಗಿದ್ದು, ಈ ತಿಂಗಳ ಕಂತನ್ನು ಚುನಾವಣೆ ಮುಗಿದ ಬಳಿಕ ಬಿಡುಗಡೆ ಮಾಡಲಾಗುವುದು. ಗ್ಯಾರಂಟಿ ಯೋಜನೆ ನಿಂತು ಹೋಗಲಿದೆ ಎಂಬ ಚಿಂತೆ ಬೇಡ. ನಾವು ಕೊಟ್ಟ ಮಾತಿಗೆ ಬದ್ಧವಾಗಿದ್ದೇವೆ. ನಿಮ್ಮಲ್ಲಿ ಆತಂಕ ಸೃಷ್ಟಿಸುತ್ತಿರುವವರು ಈ ಚುನಾವಣೆಯಲ್ಲಿ ಗೆಲ್ಲುವುದಿಲ್ಲ, ಅವರ ಸರ್ಕಾರ ಮುಂದಿನ ದಿನಗಳಲ್ಲಿ ಬರುವುದಿಲ್ಲ” ಎಂದು ತಿಳಿಸಿದರು.

ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಇಲ್ಲಿಯವರೆಗೂ ಶಾಂತಿಯುತವಾಗಿ ಪ್ರಚಾರ ನಡೆದಿದ್ದು, ಎಲ್ಲಾ ಪಕ್ಷದವರಿಗೂ ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ಸರ್ಕಾರ ಅಧಿಕಾರಿಗಳು ಬಹಳ ಶಾಂತಿಯಿಂದ ಚುನಾವಣೆ ನಡೆಸಲು ಸಹಕಾರ ನೀಡಿದ್ದಾರೆ. ನಾವು ಹಾಗೂ ಸಿಎಂ ಅವರು ಎರಡೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆ ಭಾಗವಹಿಸಿ ಬೆಂಬಲ ನೀಡಿದ್ದೇವೆ. ನಮ್ಮ ಪಕ್ಷದ ಸಂಪ್ರದಾಯದಂತೆ ಎರಡು ಕ್ಷೇತ್ರಗಳಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೊಸ ಮುಖಗಳಿಗೆ ಟಿಕೆಟ್ ನೀಡಿದ್ದೇವೆ. ದಾವಣಗೆರೆ ದಕ್ಷಿಣದಲ್ಲಿ ಆರಂಭದಲ್ಲಿ ಕೆಲವು ಸ್ನೇಹಿತರು ಹಾಗೂ ಮಾಧ್ಯಮಗಳು ಗೊಂದಲ ಮೂಡಿಸುವ ಪ್ರಯತ್ನ ಮಾಡಿದರು. ಕೆಲವರು ಸ್ಪರ್ಧೆಯಿಂದ ಹಿಂದೆ ಸರಿದು ಪಕ್ಷಕ್ಕೆ ಶಕ್ತಿ ತುಂಬಿದ್ದಾರೆ. ಇದಕ್ಕೆ ಅನೇಕ ನಾಯಕರ ಸಹಕಾರ ಸಿಕ್ಕಿದ್ದು, ಈ ಸಂದರ್ಭದಲ್ಲಿ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಗ್ರಾಮೀಣರ ಬದುಕು ಹಸನಾಗಲು ಅಭಿವೃದ್ಧಿಗೆ ಆದ್ಯತೆ
Next: ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.