ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಹೆಚ್ಚಾಗಿರುವುದರಿಂದ ಎಲ್ಲರೂ ಮಳೆರಾಯನ ಆಗಮನಕ್ಕೆ ಕಾಯುತ್ತಿದ್ದಾರೆ.
ಹೌದು, ಕಳೆದ ಒಂದು ವಾರದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಿಪರೀತ ಬಿಸಿಲಿನ ತಾಪಮಾನ ಏರಿಕೆಯಾಗಿದ್ದು, ಇದರಿಂದ ಜನರು ವರುಣನ ಆಗಮನಕ್ಕೆ ಕಾಯುತ್ತಿದ್ದಾರೆ.
ಇನ್ನು ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು ಇಂದು (ಬುಧವಾರ ಏಪ್ರಿಲ್ 8) ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ ಸೇರದಂತೆ ಇನ್ನೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಕಾಂಗ್ರೆಸ್ ದೇಶಕ್ಕೆ ಮಾದರಿಯಾಗುವ ಯೋಜನೆ ಜಾರಿಗೆ ತಂದಿದ್ದೇವೆ: ಡಿಕೆಶಿ
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.
