Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಣ್ಮನ ಸೆಳೆದ ಪತ್ರಕರ್ತರ 40ನೇ ಸಮ್ಮೇಳನ
  • Politics
  • State
  • ಶಹಾಪುರ

ಕಣ್ಮನ ಸೆಳೆದ ಪತ್ರಕರ್ತರ 40ನೇ ಸಮ್ಮೇಳನ

Praja Vahini April 13, 2026
WhatsApp Image 2026-04-12 at 22.55.25
Spread the love

ಅಮರೇಶ ಹಿರೇಮಠಗೆ ಅಭಿಮಾನಿ ಪ್ರಕಾಶನ ಪ್ರಶಸ್ತಿ ಪ್ರಧಾನ

ಶಹಾಪುರ: ಬೀದರ್‌ನ ಜನವಾಡಾ ರಸ್ತೆಯಲ್ಲಿರುವ ಝೀರಾ ಕನ್ವೇನ್ಶನ್ ಹಾಲ್‌ನ ಆವರಣದಲ್ಲಿ ಎರಡನೇ ದಿನದಂದು ರವಿವಾರ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ನಿಮಿತ್ತ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಅವರು ಅಭಿಮಾನಿ ಪ್ರಕಾಶನ ಪ್ರಶಸ್ತಿಗೆ ಭಾಜನರಾದ ಹಿರಿಯ ಪತ್ರಕರ್ತ ಅಮರೇಶ ಹಿರೇಮಠ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಎರಡು ದಿನಗಳ ಕಾಲ ನಡೆದ ಸಮ್ಮೇಳನದಲ್ಲಿ ಭಾಗವಹಿಸಿದ್ದ ಪತ್ರಕರ್ತರಿಗೆ ವಿಶೇಷವಾಗಿ ವಸತಿ, ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಪ್ರಾರಂಭದ ಕಾರ್ಯಕ್ರಮದಿಂದ ಸಮಾರೋಪ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ಅಚ್ಚುಕಟ್ಟಾಗಿ ನೇರವೆರಿತು. ಎರಡು ದಿನಗಳ ಕಾಲ ಗಾಂಧಿ –ಅಂಬೇಡ್ಕರ್ ಹಾಗೂ ಪತ್ರಿಕೋದ್ಯಮ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮತ್ತು ಮಾಧ್ಯಮ, ಮಾಹಿತಿ ಹಕ್ಕು ಮತ್ತು ಪತ್ರಕರ್ತರು, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್/ ಡಿಜಿಟಲೀಕರಣದ ಪ್ರಭಾವ ನಾಲ್ಕು ವಿಚಾರಗೋಷ್ಠಿಗಳು ಜರುಗಿತು. ಬಳಿಕ ಪ್ರತಿನಿಧಿಗಳ ಸಮಾವೇಶ , ಸರ್ವ ಸದಸ್ಯರ ಸಭೆ ನಂತರ ಸಮಾರಂಭ. ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭಗಳು ಅದ್ದೂರಿಯಾಗಿ ಜರುಗಿದವು. ಪ್ರತಿಯೊಂದು ಕಾರ್ಯಕ್ರಮವು ನೋಡುಗರ ಕಣ್ಮನ ಸೆಳೆದವು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  ಇದನ್ನೂ ಓದಿ: ಅನೇಕ ಶಕ್ತಿಗಳು ಸಮಾಜವನ್ನು ವಿಭಜಿಸುವ ಪ್ರಯತ್ನ ಮಾಡುತ್ತಿದ್ದಾರೆ: ಸಿಎಂ

ಈ ಸಂದರ್ಭದಲ್ಲಿ ಅರಣ್ಯ ಜೀವಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ಬಂಡೆಪ್ಪ ಕಾಶಂಪೂರ, ಶಾಸಕ ಶರಣು ಸಲಗರ, ಕೆಯುಡಬ್ಲಯೂಜೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ ಲೋಕೇಶ್, ಯಾದಗಿರಿ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್, ಸಂಘದ ಬೀದರ್ ಜಿಲ್ಲಾಧ್ಯಕ್ಷ ಆನಂದ ದೇವಪ್ಪ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು, ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಪತ್ರಕರ್ತರು ಇದ್ದರು.

ಪ್ರಶಸ್ತಿ ಪುರಸ್ಕೃತರು

ಜಿಲ್ಲೆಯಿಂದ ಹಿರಿಯ ಪತ್ರಕರ್ತರಾದ ಸಂಜೀವರಾವ್ ಕುಲ್ಕರ್ಣಿಯವರಿಗೆ ಕೆಯುಡಬ್ಲೂö್ಯಜೆ ವಿಶೇಷ ಪ್ರಶಸ್ತಿ, ಅಮರೇಶ ಹಿರೇಮಠ ಅವರಿಗೆ ಅಭಿಮಾನಿ ಪ್ರಕಾಶನ ಪ್ರಶಸ್ತಿ, ಬಸವರಾಜ ಕಟ್ಟಿಮನಿ ಅವರಿಗೆ ಗಿರಿಧರ್ ಪ್ರಶಸ್ತಿ, ಮಲ್ಲಯ್ಯ ಪೋಲಂಪಲ್ಲಿ ಅವರಿಗೆ ಪಟೇಲ್ ಭೈರಹನುಮಯ್ಯ ಪ್ರಶಸ್ತಿಗೆ ಭಾಜನರಾದ ಪತ್ರಕರ್ತರಿಗೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ತಾಲೂಕ ಪತ್ರಕರ್ತರಿಂದ ಸನ್ಮಾನ

ಅಭಿಮಾನ ಪ್ರಕಾಶನ ಪ್ರಶಸ್ತಿ ಪುರಸ್ಕೃತರಾದ ಅಮರೇಶ ಹಿರೇಮಠ ಅವರ ದಂಪತಿಗಳಿಗೆ ಶಹಾಪುರ ತಾಲೂಕ ಹಿರಿಯ ಪತ್ರಕರ್ತರಿಂದ ವಿಶೇಷವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪತ್ರಕರ್ತರಾದ ನಾರಾಯಣಾಚಾರ್ಯ ಸಗರ, ಟಿ.ನಾಗೇಂದ್ರ, ರವಿ ಹಿರೇಮಠ, ಈರಣ್ಣ ಮೌರ್ಯ ಇದ್ದರು.

About the Author

Praja Vahini

Editor

View All Posts

Spread the love

Post navigation

Previous: ಅನೇಕ ಶಕ್ತಿಗಳು ಸಮಾಜವನ್ನು ವಿಭಜಿಸುವ ಪ್ರಯತ್ನ ಮಾಡುತ್ತಿದ್ದಾರೆ: ಸಿಎಂ
Next: ಸಿಎಂ ಸಿದ್ದು ವೈಫ್ ಟೆಂಪಲ್ ರನ್

Views:

109

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.