ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಸೋಮವಾರ ಏ. 13) ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಲವಾರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದು, ತಮ್ಮದೇ ಹೆಸರಿನ ಸೇತುವೆಯನ್ನು ಉದ್ಘಾಟನೆ ಮಾಡಿದ್ದಾರೆ.
ಹೌದು, ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಹಂದೂರು ಬಳಿ ನಿರ್ಮಿಸಲಾಗಿರುವ ಬೃಹತ್ ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಉದ್ಘಾಟಿಸಿದರು. ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕ ಕಲ್ಪಿಸುವ ಈ ಸೇತುವೆಯನ್ನು 34 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಇದಕ್ಕೆ ‘ಸಿದ್ದರಾಮಯ್ಯ ಸೇತುವೆ’ ಎಂದು ನಾಮಕರಣ ಮಾಡಲಾಗಿದೆ.
ಉದ್ಘಾಟನೆ ಬಳಿಕ ಸೇತುವೆ ವೀಕ್ಷಿಸಿದ ಸಿಎಂ, ನಂತರ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 100 ಕೋಟಿ ರೂ. ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದರು. ಇದನ್ನೂ ಓದಿ: ಭಗವಂತನ ಇಚ್ಛೆ, ಜನರ ಆಶೀರ್ವಾದ ಇದ್ದರೆ ಮತ್ತೆ ವಿಧಾನಸೌಧಕ್ಕೆ ಬಂದೇ ಬರುತ್ತೇನೆ: ಹೆಚ್ ಡಿ ಕುಮಾರಸ್ವಾಮಿ
ಈ ಸಂದರ್ಭದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜುಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ ಬಾಲಕೃಷ್ಣ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಹಿರಿಯ ಸಂಪಾದಕರಾದ ವಿಶ್ವೇಶ್ವರ ಭಟ್, KSTDC ಅಧ್ಯಕ್ಷರಾದ ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
