Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇಂದು ಸಿಎಂ ಜಮೀರ್ ಅಹ್ಮದ್ ನಡುವೆ ಮಹತ್ವದ ಸಭೆ
  • Bangalore
  • Politics
  • State
  • Uncategorized

ಇಂದು ಸಿಎಂ ಜಮೀರ್ ಅಹ್ಮದ್ ನಡುವೆ ಮಹತ್ವದ ಸಭೆ

Praja Vahini April 14, 2026 1 minute read
Thumbnail for website
Spread the love

ಬೆಂಗಳೂರು: ದಾವಣಗೆರೆ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿದ್ದ ಕಾರಣಕ್ಕೆ ರಾಜ್ಯ ರಾಜಕೀಯದಲ್ಲಿ ಭಿನ್ನಮತ ಎದ್ದು ಕಾಣುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಂಗಳವಾರ ಏ. 14) ಸಚಿವ ಜಮೀರ್ ಅಹ್ಮದ್ ಅವರನ್ನು ತುರ್ತು ಬುಲಾವ್ ನೀಡಿದ್ದಾರೆ.

ಹೌದು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಿದ ಕಾರಣಕ್ಕೆ ರಾಜ್ಯ ಕಾಂಗ್ರೆಸ್ ನಲ್ಲಿ ಈಗಾಗಲೇ ಹಲವಾರು ಮಹತ್ವದ ಚಟುವಟಿಕೆಗಳು ನಡೆಯುತ್ತಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಅವರು ಜಮೀರ್ ಅಹ್ಮದನ್ನು ಕರೆದು ಮಹತ್ವದ ಸಭೆ ನಡೆಸಿದ್ದಾರೆ.

ಸಿಎಂ ನಿವಾಸ ‘ಕಾವೇರಿ’ಯಲ್ಲಿ ಇಬ್ಬರ ನಡುವೆ ಮಹತ್ವದ ಸಭೆ ನಡೆಯಲಿದ್ದು, ಪಕ್ಷದ ಒಳಗಿನ ಅಸಮಾಧಾನ ಶಮನಕ್ಕೆ ಈ ಸಭೆ ಪ್ರಮುಖವಾಗಲಿದೆ ಎಂದು ತಿಳಿದುಬಂದಿದೆ.

ಇನ್ನು ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಅಬ್ದುಲ್ ಜಬ್ಬಾರ್ ಅಲ್ಪಸಂಖ್ಯಾತ ಘಟಕದ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮತ್ತೊಂದೆಡೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿದ್ದ ನಜೀರ್ ಅಹಮದ್ ಅವರನ್ನು ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ. ಹೈಕಮಾಂಡ್ ಸೂಚನೆಗೂ ಮೀರಿಸಿ ರಾಜೀನಾಮೆ ನೀಡಲು ನಿರಾಕರಿಸಿದ ಕಾರಣ ಅವರನ್ನು ವಜಾಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಬೆಳವಣಿಗೆಗಳ ನಡುವೆ ಸಿದ್ದರಾಮಯ್ಯ ಹಾಗೂ ಜಮೀರ್ ಅಹಮದ್ ಖಾನ್ ನಡುವಿನ ಚರ್ಚೆ ಪಕ್ಷದ ಒಳಗಿನ ಗೊಂದಲಗಳನ್ನು ನಿವಾರಿಸುವುದೇ ಅಥವಾ ಮತ್ತಷ್ಟು ವಿವಾದಗಳಿಗೆ ಕಾರಣವಾಗುವುದೇ ಎಂಬುದನ್ನು ಕಾದು ನೋಡಬೇಕಿದೆ.

 

About the Author

Praja Vahini

Editor

View All Posts

Spread the love

Post navigation

Previous: ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆಯಾದ ವಚನಾನಂದ ಸ್ವಾಮೀಜಿ
Next: ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಮೇಲೆ ಅಧಿಕಾರಿಗಳಿಂದ ಲಾಠಿ ಚಾರ್ಜ್!

Views:

49

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.