ಪಾಟ್ನಾ: ನಿತೀಶ್ ಕುಮಾರ್ ಅವರು ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಹೌದು, 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಅವರು ರಾಜೀನಾಮೆ ನೀಡಿದ್ದಾರೆ.
ತಮ್ಮ ಸಚಿವ ಸಂಪುಟವನ್ನು ವಿಸರ್ಜಿಸಿದ ನಂತರ ಅವರು ಇಂದು (ಮಂಗಳವಾರ ಏ. 14) ಮಧ್ಯಾಹ್ನ ಲೋಕ ಭವನದಲ್ಲಿ ರಾಜ್ಯಪಾಲರಾದ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸೈಯದ್ ಅತಾ ಹಸ್ನೈನ್ ಅವರಿಗೆ ರಾಜೀನಾಮೆ ಸಲ್ಲಿಸಿದರು. ಇದನ್ನೂ ಓದಿ: ಸಂವಿಧಾನ ಕೇವಲ ಪುಸ್ತಕವಲ್ಲ, ಅದು ನಮ್ಮ ಬದುಕಿನ ದಾರಿದೀಪ: ಡಿಕೆಶಿ
ಬಿಹಾರದಲ್ಲಿ ಬಿಜೆಪಿ ಮುಂದಿನ ಸರ್ಕಾರ ರಚಿಸಲಿದೆ. ಆದರೆ, ಅವರ ಉತ್ತರಾಧಿಕಾರಿ ಯಾರು ಉನ್ನತ ಹುದ್ದೆಯಲ್ಲಿ ಇರುತ್ತಾರೆ ಎಂಬುದು ಇನ್ನೂ ಖಚಿತವಾಗಿಲ್ಲ. ನಿತೀಶ್ ಕುಮಾರ್ ಉತ್ತರಾಧಿಕಾರಿ ನಾಳೆ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ.
