Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಪಾರ್ಕಿಂಗ್ ಸಮಸ್ಯೆಗೆ ಪರಿಹಾರ
  • Bangalore
  • Politics
  • State

ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಪಾರ್ಕಿಂಗ್ ಸಮಸ್ಯೆಗೆ ಪರಿಹಾರ

Praja Vahini April 16, 2026 1 minute read
WhatsApp Image 2026-04-16 at 15.49.44
Spread the love

ಬೆಂಗಳೂರು: ಕೆಂಪೇಗೌಡ ಬಸ್ ನಿಲ್ದಾಣದ ಟರ್ಮಿನಲ್-01 ರಲ್ಲಿ ಪುನರ್‌ ಅಭಿವೃದ್ಧಿಪಡಿಸಿರುವ ಪಾರ್ಕಿಂಗ್ ಪ್ರದೇಶಕ್ಕೆ ಇಂದು (ಬುಧವಾರ ಏ. 16)  ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರು, ಚಾಲನೆ ನೀಡಿದರು.

ವಾಹನಗಳ ಸುಗಮ ಸಂಚಾರ, ಸಿಬ್ಬಂದಿಗಳು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಉತ್ತಮವಾದ ಪಾರ್ಕಿಂಗ್ ಜಾಗವನ್ನು ರೂ.03.29 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಬಸ್ ನಿಲ್ದಾಣದಲ್ಲಿನ ಟರ್ಮಿನಲ್-01 ರ ಬಳಿಯಿರುವ (ವಿಶ್ರಾಂತಿ ಗೃಹ) ಕ್ಕೆ ಹೊಂದಿ ಕೊಂಡಂತೆ ಇರುವ ಸ್ಥಳವು ಗುಂಡಿಗಳಿಂದ ತುಂಬಿ, ಮಳೆ ಬಂದ ಸಂದರ್ಭದಲ್ಲಿ ಮಳೆಯ ನೀರು ಸಹ ತುಂಬಿಕೊಂಡು ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಸದರಿ ಸ್ಥಳದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ತುಂಬಾ ತೊಂದರೆಯುಂಟಾಗುತ್ತಿತ್ತು.

ಈ‌ ಬಗ್ಗೆ‌ ಮಾನ್ಯ ಸಾರಿಗೆ ಸಚಿವರ ಗಮನಕ್ಕೆ ಬಂದ‌ ಕೂಡಲೇ  ಭೇಟಿ ನೀಡಿ ತುರ್ತಾಗಿ ಪಾರ್ಕಿಂಗ್ ಆವರಣವನ್ನು ಅಭಿವೃದ್ದಿಪಡಿಸಬೇಕೆಂದು ಆದೇಶ‌ ನೀಡಿದ್ದರು.

ಎರಡುವರೆ ಎಕರೆ ಪ್ರದೇಶವನ್ನು ವಾಹನ ನಿಲುಗಡೆಗೆ ಸೂಕ್ತವಾಗಿ ಅಭಿವೃದ್ದಿಪಡಿಸಲು  ಟೆಂಡರ್ ಕರೆದು, ಕಾಮಗಾರಿ ಕೆಲಸ ಪೂರ್ಣಗೊಳಿಸಲಾಗಿದೆ.

ಈ ಜಾಗದಲ್ಲಿ ಅಂದಾಜು 100 ಬಸ್ ಗಳ ನಿಲುಗಡೆಗೆ ವ್ಯವಸ್ಥೆ ಮಾಡಬಹುದಾಗಿದೆ. ಪಾರ್ಕಿಂಗ್ ಸ್ಥಳದಲ್ಲಿ 11 ಸಂಖ್ಯೆಯ ವಿದ್ಯುತ್ ದೀಪದ ಕಂಬಗಳು, ವಿದ್ಯುತ್ ಪ್ಯಾನಲ್ ಕೊಠಡಿಯನ್ನು  ಕೂಡ ನಿರ್ಮಾಣ‌‌‌ ಮಾಡಲಾಗಿದೆ.

ವಾಯುವ್ಯ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗಳಿಗೆ ನಿಲುಗಡೆಗೆ ಸ್ಥಳಾವಕಾಶ ಕಲ್ಪಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಅಕ್ರಂ ಪಾಷ ಭಾಆಸೇ, ವ್ಯವಸ್ಥಾಪಕ ನಿರ್ದೇಶಕರು, ಕರಾರಸಾ ನಿಗಮ ಹಾಗೂ ನಿಗಮದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಕನ್ನಡ ಸಾಮರಸ್ಯ ನೆಲೆಗಳು ಕುರಿತಾದ 41 ಕೃತಿಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ
Next: ಕುಡಿಯುವ ನೀರಿಗೆ ತೊಂದರೆಯಾದರೆ ಜಿಲ್ಲಾಧಿಕಾರಿಗಳೇ ಹೊಣೆ: ಸಿಎಂ

Views:

31

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.