Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಂವಿಧಾನಕ್ಕೆ 73, 74ನೇ ತಿದ್ದುಪಡಿ ತಂದಿದ್ದೇ ಕಾಂಗ್ರೆಸ್ ಪಕ್ಷ: ಸಿಎಂ
  • Bangalore
  • Politics
  • State

ಸಂವಿಧಾನಕ್ಕೆ 73, 74ನೇ ತಿದ್ದುಪಡಿ ತಂದಿದ್ದೇ ಕಾಂಗ್ರೆಸ್ ಪಕ್ಷ: ಸಿಎಂ

Praja Vahini April 20, 2026 1 minute read
WhatsApp Image 2026-04-20 at 21.32.43
Spread the love

ಮೈಸೂರು: ಸಂವಿಧಾನಕ್ಕೆ 73, 74ನೇ ತಿದ್ದುಪಡಿಯನ್ನು ತಂದಿದ್ದು ಕಾಂಗ್ರೆಸ್ ಪಕ್ಷ. ಸ್ಥಳೀಯ ಸಂಸ್ಥೆಗಳಲ್ಲಿ 50% ಮಹಿಳಾ ಮೀಸಲಾತಿ ತಂದಿದ್ದು ಕೂಡ ಕಾಂಗ್ರೆಸ್ ಪಕ್ಷವೇ. 2023 ರಲ್ಲಿಯೇ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿದ್ದು ಆಗಲೇ ಅದನ್ನು ಜಾರಿ ಮಾಡಬೇಕಿತ್ತು, ಇಲ್ಲಿಯವರೆಗೆ ಏಕೆ ಕಾಯಬೇಕಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಇಂದು (ಸೋಮವಾರ ಏಪ್ರಿಲ್ 20) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ನಾವು ಅದಕ್ಕಾಗಿಯೇ ಕ್ಷೇತ್ರ ಮರು ವಿಂಗಡಣೆಯನ್ನು ವಿರೋಧ ಮಾಡಿದೆವು. ನಾವು ಎಂದಿಗೂ ಮಹಿಳಾ ಮೀಸಲಾತಿಯ ಪರವಾಗಿಯೇ ಇದ್ದೇವೆ ಎಂದರು.

ವಿರೋಧಿಸಿದವರೇ ಗ್ಯಾರಂಟಿ  ಕೊಡುತ್ತಿದ್ದಾರೆ

ಗ್ಯಾರಂಟಿಗಳನ್ನು ಎಲ್ಲಾ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಿರುವ ಬಗ್ಗೆ ಮಾತನಾಡಿ 2023 ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಿರೋಧಿಸಿದ್ದರು. ಈಗ ಅವರೇ ಯೋಜನೆಗಳನ್ನು ಘೋಷಿಸುತ್ತಿದ್ದಾರೆ ಎಂದರು.

ಮಹಿಳಾ ಮೀಸಲಾತಿ ಪರವಾಗಿದ್ದೇವೆ ಎಂದು ಪ್ರಧಾನಿಗಳಿಗೆ ತಿಳಿಸಿದೆ

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಹಾಗೂ ಪ್ರಧಾನಿಗಳ ನಡುವೆ ಆದ ಮಾತುಕತೆಯ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಮಹಿಳಾ ಮೀಸಲಾತಿ ಬಗ್ಗೆ ನಿಮ್ಮ ನಿಲುವೇನು ಎಂದು ಪ್ರಧಾನಿಗಳು ಕೇಳಿದ್ದರು. ನಾವು ಮಹಿಳಾ ಮೀಸಲಾತಿಯ ಪರವಾಗಿದ್ದೇವೆ ಎಂದು ತಿಳಿಸಿದ್ದಾಗಿ ಮುಖ್ಯಮಂತ್ರಿಗಳು ಹೇಳಿದರು. ಇದನ್ನೂ ಓದಿ: ಶಾಸಕ ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ

ಪ್ರಧಾನಿಗಳು ಸಾಮಾಜಿಕ ನ್ಯಾಯದ ಪರವಾಗಿಲ್ಲ

ಮಹಿಳಾ ಮೀಸಲಾತಿ ಮಸೂದೆಯನ್ನು ತಿರಸ್ಕರಿಸುವ ಮೂಲಕ ಕಾಂಗ್ರೆಸ್ ಭ್ರೂಣ ಹತ್ಯೆ ಮಾಡಿದೆ ಎಂದು ಪ್ರಧಾನಿಗಳು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪ್ರಧಾನಿಗಳದ್ದು ತಾರತಮ್ಯದ ಧೋರಣೆಯಾಗಿದ್ದು, ಅವರು ಸಾಮಾಜಿಕ ನ್ಯಾಯದ ಪರವಾಗಿಲ್ಲ ಎಂದರು.

ಅವರು ಅಧಿಕಾರಕ್ಕೆ ಬಂದು 12 ವರ್ಷಗಳಲ್ಲಿ ಮಹಿಳಾ ಮೀಸಲಾತಿ ಏಕೆ ಜಾರಿಮಾಡಲಿಲ್ಲ ಎಂದು ಪ್ರಶ್ನಿಸಿದರು. ಈಗಲೂ 2023ರ ಪ್ರಕಾರ ಜಾರಿ ಮಾಡಲಿ. ಕ್ಷೇತ್ರ ಮರು ವಿಂಗಡನೆಯನ್ನು ಜನಗಣತಿಯಾದ ನಂತರ ಮಾಡಿದರೆ ಸೂಕ್ತ ಎಂದರು. ಲೋಕಸಭಾ ಸ್ಥಾನಗಳನ್ನು ಶೇಕಡ 50% ರಷ್ಟು ಹೆಚ್ಚು ಮಾಡುವುದಾಗಿ ಹೇಳಿದ್ದು,  ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ. ಜನಗಣತಿ ಮಾಡಿ ಎಲ್ಲರಿಗೂ ಸಮಾನವಾಗಿ ಸ್ಥಾನಗಳನ್ನು ಕೊಡಬೇಕು ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಶಾಸಕ ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ
Next: ಕ್ರಾಂತಿ ಯೋಗಿ ಬಸವ ಜಯಂತಿಯಲ್ಲಿ ಮಾಜಿ ಸಿಎಂ ಭಾಗಿ

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.