ಬೆಂಗಳೂರು: ರಾಜ್ಯದಲ್ಲಿ ಕಳೆದ 15 ದಿನಗಳಿಂದ ಹೆಚ್ಚು ಬಿಸಿಲಿರುವುದರಿಂದ ಬಿಸಿಲಿನ ಬೇಗ ತಡೆಯದೆ ಜನರು ಹೈರಾಣಾಗಿದ್ದಾರೆ.
ಇನ್ನು ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಒಂದು ವಾರಗಳ ಕಾಲ ಹೆಚ್ಚಿನ ಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಯಚೂರು ಹಾಗೂ ಕಲಬುರಗಿಯಲ್ಲಿ ಉಷ್ಣಾಂಶ 41 ಡಿಗ್ರಿ ದಾಟಿದೆ. ಬೆಂಗಳೂರಿನಲ್ಲಿ 36-37 ಡಿಗ್ರಿ ಉಷ್ಣಾಂಶವಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೊಂದು ವಾರ 40-42 ಡಿಗ್ರಿ ಉಷ್ಣಾಂಶ ಇರಲಿದೆ ಎಂದು ಸಿಎಸ್ ಪಾಟೀಲ್ ತಿಳಿಸಿದ್ದಾರೆ. ಇದನ್ನೂ ಓದಿ: ಎರಡನೇ ಮದುವೆ ಬಗ್ಗೆ ಚಂದನ್ ಶೆಟ್ಟಿ ಹೇಳಿದ್ದೇನು?
ಬೆಂಗಳೂರಿನಲ್ಲಿಯೂ ಉಷ್ಣಾಂಶ ಹೆಚ್ಚಾಗಲಿದೆ. ಹಗಲು ಮಾತ್ರವಲ್ಲ, ರಾತ್ರಿ ವೇಳೆಯಲ್ಲೂ ಉಷ್ಣಾಂಶ ಹೆಚ್ಚಿರುವುದರಿಂದ ವಿಪರೀತ ಸೆಕೆಯಾಗಲಿದೆ ಎಂದು ಹೇಳಿದ್ದಾರೆ.
