ಚಾಮರಾಜನಗರ: ಹದಗೂರು ಶ್ರೀ ಬೀರೇಶ್ವರ ಸ್ವಾಮಿ (ತೊರಸಾಲಪ್ಪ) ಸೇವಾ ಸಮಿತಿ ಆಯೋಜಿಸಿದ್ದ ಶ್ರೀ ಬೀರೇಶ್ವರ ಸ್ವಾಮಿ ದೇವಸ್ಥಾನದ ಕುಂಬಾಭಿಷೇಕ ಮಹೋತ್ಸವದಲ್ಲಿ ಭಾಗವಹಿಸಿ, ಆಗಮಿಸಿದ್ದ ಭಕ್ತಾದಿಗಳಿಗೆ ಇಂದು (ಗುರುವಾರ ಏ. 23) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಹಾರೈಸಿದರು. ಇದನ್ನೂ ಓದಿ: ಕಾಂಗ್ರೆಸ್ಸಿಗೆ ಪ್ರಧಾನಿಯವರ ಜನಪ್ರಿಯತೆ ಸಹಿಸಿಕೊಳ್ಳಲು ಆಗುತ್ತಿಲ್ಲ: ಬಿವೈವಿ
ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳು ಮತ್ತು ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷರಾದ ರಾಮಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಬೈರತಿ ಸುರೇಶ್, ಮಾಜಿ ಸಚಿವರಾದ ಹೆಚ್.ಎಂ.ರೇವಣ್ಣ, ಅರವಿಂದ ಲಿಂಬಾವಳಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
