Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಡಿ ಸುಧಾಕರ್‌ ಆರೋಗ್ಯದ ಕುರಿತು ಡಿಸಿಎಂ ಹೇಳಿದ್ದೇನು?
  • Bangalore
  • Politics
  • State

ಡಿ ಸುಧಾಕರ್‌ ಆರೋಗ್ಯದ ಕುರಿತು ಡಿಸಿಎಂ ಹೇಳಿದ್ದೇನು?

Praja Vahini April 27, 2026 1 minute read
WhatsApp Image 2026-04-27 at 15.19.36
Spread the love

ಬೆಂಗಳೂರು: ಕೆಲದಿನಗಳ ಹಿಂದೆ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಡಿ.ಸುಧಾಕರ್‌ ಅವರಲ್ಲಿ ದಿಢೀರನೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತ್ತು. ದೇಹಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಅವರನ್ನು ಎಲೆಕ್ಟ್ರಾನಿಕ್‌ ಸಿಟಿಯ ಕೃಷ್ಣ ಆರೋಗ್ಯ ವಿಜ್ಞಾನಗಳ ಸಂಸ್ಥೆಗೆ ಸ್ಥಳಾಂತರಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದೀಗ ಸಚಿವ ಡಿ ಸುಧಾಕರ್ ಅವರ ಸ್ಥಿತಿ ಸುಧಾರಿಸುತ್ತಿದ್ದು, ನಿನ್ನೆ (ಭಾನುವಾರ ಏಪ್ರಿಲ್ 26) ರಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಡಿ ಸುಧಾಕರ್ ಅವರ ಆರೋಗ್ಯ ವಿಚಾರಿಸಿ ಜೊತೆಗೆ ಕುಟುಂಬದವರನ್ನು ಭೇಟಿ ಮಾಡಿ ಮಾತನಾಡಿಸಿದ್ದಾರೆ.

2 ವಾರಗಳ ಹಿಂದೆ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದ ಮುಖ್ಯಮಂತ್ರಿಗಳು ಕಳೆದ ಶನಿವಾರವೂ ಮತ್ತೊಮ್ಮೆ ಭೇಟಿ ಕೊಟ್ಟಿದ್ದರು. ಭಾನುವಾರ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿದ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ‘‘ಸಚಿವರಿಗೆ ಶ್ವಾಸಕೋಶ ಕಸಿ (ಟ್ರಾನ್ಸ್‌ಪ್ಲಾಂಟ್‌) ಆಗಬೇಕಿದೆ. ಟ್ರಾನ್ಸ್‌ಪ್ಲಾಂಟ್‌ ಮಾಡಲು ಮೆದುಳು ಪ್ರಜ್ಞೆಯಲ್ಲಿರಬೇಕು. ಆದರೆ, ಇನ್ನೂ ಪ್ರಜ್ಞೆ ಬಂದಿಲ್ಲ. ಈ ಬಗ್ಗೆ ತೀರ್ಮಾನ ಮಾಡಲಿದ್ದಾರೆ,’’ ಎಂದಿದ್ದರು. ಇದನ್ನೂ ಓದಿ: ಡಿಕೆಶಿಗೆ ಮೇ ತಿಂಗಳಲ್ಲಿ ಸಿಗಲಿದೆ ಸಿಹಿ ಸುದ್ದಿ-ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ ಶಾಸಕ ಡಾ. ರಂಗನಾಥ್!

ಅವರು ಬೇಗ ಚೇತರಿಸಿಕೊಳ್ಳಲಿದ್ದಾರೆ. ಕೃತಕ ಉಸಿರಾಟದ ವ್ಯವಸ್ಥೆಯಲ್ಲಿ ಸುಧಾಕರ್‌ ಅವರ ದೇಹದ ಎಲ್ಲ ಭಾಗಗಳ ಸ್ಥಿತಿ ಸ್ಥಿರವಾಗಿದ್ದು, ಪ್ರಜ್ಞೆ ಮಾತ್ರ ಇಲ್ಲ. ವೈದ್ಯರು ಸಿಟಿ ಸ್ಕ್ಯಾ‌ನ್‌ ಮಾಡಿದ ಬಳಿಕ ಆರೋಗ್ಯ ಸ್ಥಿತಿ ಗೊತ್ತಾಗಲಿದೆ ಎಂದು ಹೇಳಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಪ್ರತಿದಿನ ಮೊಟ್ಟೆ ತಿಂದರೆ ಏನಾಗುತ್ತದೆ ಗೊತ್ತಾ?
Next: ಮದುವೆ ಇಲ್ಲದೆಯೇ ಮಗು ಪಡೆಯುವುದರಲ್ಲಿ ತಪ್ಪೇನಿಲ್ಲ: ನಿತ್ಯಾ ಮೆನನ್

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.