ಹಾವೇರಿ: ಹಾವೇರಿ ಜಿಲ್ಲೆಯ ಸವಣೂರ ತಾಲೂಕಿನ ಮನ್ನಂಗಿ ಗ್ರಾಮದ ಶ್ರೀ ದ್ಯಾಮವ್ವದೇವಿ ದೇವಸ್ಥಾನ ಹಾಗೂ ಆಂಜನೇಯ ದೇವಸ್ಥಾನದ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ – ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿರವರು ಭಾಗವಹಿಸಿದ್ದರು.
ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಇಂತಹ ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡುವುದರಿಂದ ದೇವರ ಮೇಲೆ ಭಕ್ತಿ ಹೆಚ್ಚಾಗುವುದರ ಜೊತೆಗೆ ಎಲ್ಲರೂ ಭಾವೈಕ್ಯತೆಯಿಂದ ಭಾಗವಹಿಸಿ ಕಾರ್ಯಕ್ರಮ ಮಾಡುವುದು ಕಣ್ಣಿಗೆ ನೋಡಲು ಹಬ್ಬವಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಕೆಎಸ್ಡಿಎಲ್ ವಹಿವಾಟಿನಲ್ಲಿ ಮಹಾದಾಖಲೆ: ಎಂ ಬಿ ಪಾಟೀಲ
ಈ ಸಂಧರ್ಭದಲ್ಲಿ ಶ್ರೀ ಮ.ನಿ.ಪ್ರ ಸದಾಶಿವ ಮಹಾಸ್ವಾಮಿಗಳು, ಹುಕ್ಕೇರಿ ಮಠ, ಹಾವೇರಿ, ಶ್ರೀ ಮ.ನಿ.ಪ್ರ ಗುರು ಮಹೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಗುರುನಂಜೇಶ್ವರ ಮಠ, ಕೂಡಲ, ಶ್ರೀ ಷ.ಬ್ರ ನಂಜುಂಡ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಗುಬ್ಬಿ ನಂಜುಂಡೇಶ್ವರ ಮಠ, ಹೆರೂರು ಶ್ರೀಗಳವರು ಸಾನಿಧ್ಯ ವಹಿಸಿದ್ದರು. ಹಾಗೂ ಮುಖಂಡರಾದ ಶ್ರೀ ರಾಜು ಕುನ್ನೂರ, ಶ್ರೀಮತಿ ಶೋಭಾ ನಿಸ್ಸಿಮಗೌಡ್ರ ಸೇರಿದಂತೆ ಹಲವಾರು ಪ್ರಮುಖರು ಹಾಗೂ ಮುಖಂಡರು ಉಪಸ್ಥಿತರಿದ್ದರು.
