ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ಸತೀಶ್ ರೆಡ್ಡಿ ಅವರ ನೇತೃತ್ವದಲ್ಲಿ ಇಂದು (ಬುಧವಾರ ಏಪ್ರಿಲ್ 29) ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ (GBA) ಬೆಂಗಳೂರು ದಕ್ಷಿಣ ನಗರ ಪಾಲಿಕೆ ವಲಯ-1 ಕಚೇರಿಯಲ್ಲಿ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಈ ಸಭೆಯಲ್ಲಿ ಜಂಟಿ ಆಯುಕ್ತರಾದ ಸತೀಶ್ ಬಾಬು ಅವರೊಂದಿಗೆ ವಿವಿಧ ನಾಗರಿಕ ಸಮಸ್ಯೆಗಳು ಹಾಗೂ ಮುಂದಿನ ಅಭಿವೃದ್ಧಿ ಯೋಜನೆಗಳ ಕುರಿತು ಸಮಗ್ರವಾಗಿ ಚರ್ಚಿಸಿದರು.
ಇನ್ನು ಮುಂಗಾರು ಮಳೆಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಅಧಿಕಾರ ಹಂಚಿಕೆ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು
ಈ ಸಭೆಯಲ್ಲಿ ಇಂಜಿನಿಯರಿಂಗ್, ಎಸ್ಡಬ್ಲ್ಯೂಎಂ (SWM), ಬೆಸ್ಕಾಂ (BESCOM), ಬಿ.ಡ್ಲ್ಯೂ.ಎಸ್.ಎಸ್.ಬಿ (BWSSB), ಕೆರೆ ಅಭಿವೃದ್ಧಿ ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
