ಬೆಂಗಳೂರು: ಬೆಂಗಳೂರು ನಗರದಲ್ಲಿ ನಿನ್ನೆ ಸಂಜೆ (ಬುಧವಾರ ಏಪ್ರಿಲ್ 29) ಸುರಿದ ಧಾರಾಕಾರ ಮಳೆಯಿಂದಾಗಿ ಹಲವು ಅವಾಂತರಗಳು ಸೃಷ್ಟಿಯಾಗಿದ್ದು, ಬೆಂಗಳೂರಿನ ಶಿವಾಜಿನಗರದ ಬೋರಿಂಗ್ ಆಸ್ಪತ್ರೆಯ ಗೋಡೆ ಕುಸಿದು ಎಂಟು ಜನ ಸಾವನ್ನುಪ್ಪಿರುವ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಜೊತೆಗೆ ಮೃತ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿ ವತಿಯಿಂದ ತಲಾ 5 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಅಲ್ಲದೆ ಉಪ ಮುಖ್ಯಮಂತ್ರಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿ ಅಧಿಕಾರಿಗಳಿಗೆ ರಸ್ತೆ ಸರಿಪಡಿಸುವಂತೆ ಮತ್ತು ಮಣ್ಣು ತೆಗೆಯುವಂತೆ ಕಡಕ್ ಸೂಚನೆಯನ್ನು ನೀಡಿದ್ದಾರೆ. ಇದನ್ನೂ ಓದಿ: ಶಿವಾಜಿನಗರದಲ್ಲಿ ಮಳೆಯಿಂದ ಕಾಂಪೌಂಡ್ ಕುಸಿದು 8 ಜನ ಸಾವು! ಘಟನಾ ಸ್ಥಳಕ್ಕೆ ಸಿಎಂ ಭೇಟಿ
ಇನ್ನು ಇಂದು ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಕೂಡ ಬೌರಿಂಗ್ ಆಸ್ಪತ್ರೆಯಲ್ಲಿ ನಡೆದ ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
