Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಶಿಥಿಲಾವಸ್ಥೆಯಲ್ಲಿರುವ ಆಸ್ಪತ್ರೆ ಕಟ್ಟಡಗಳು, ಕಾಂಪೌಂಡ್‌ಗಳ ಪರಿಶೀಲನೆಗೆ ಆದೇಶ: ಶರಣಪ್ರಕಾಶ ಪಾಟೀಲ್
  • Bangalore
  • Front news
  • Politics
  • State

ಶಿಥಿಲಾವಸ್ಥೆಯಲ್ಲಿರುವ ಆಸ್ಪತ್ರೆ ಕಟ್ಟಡಗಳು, ಕಾಂಪೌಂಡ್‌ಗಳ ಪರಿಶೀಲನೆಗೆ ಆದೇಶ: ಶರಣಪ್ರಕಾಶ ಪಾಟೀಲ್

Praja Vahini April 30, 2026
68022ec3-71ec-4c91-8d76-f2514f4e5271
Spread the love

ಬೆಂಗಳೂರು: ನಮ್ಮ ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಎಲ್ಲ ಆಸ್ಪತ್ರೆಯ ಕಟ್ಟಡಗಳನ್ನು ಹಾಗೂ ಕಾಂಪೌಂಡ್‌ಗಳನ್ನು ಪರಿಶೀಲನೆ ನಡೆಸಿ ಅಧ್ಯಯನ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್  ತಿಳಿಸಿದ್ದಾರೆ.

ಮಳೆಯಿಂದ ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 8 ಮಂದಿ ಮೃತಪಟ್ಟ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳು, ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಮಾತನಾಡಿದ ಅವರು, ಬೌರಿಂಗ್‌ ಆಸ್ಪತ್ರೆಯ ದುರಂತದ ಕುರಿತು ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರರ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಈ ವರದಿ ಬಂದ ನಂತರ ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬೌರಿಂಗ್‌ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ರಾಜ್ಯದಲ್ಲಿರುವ ಎಲ್ಲ ಆಸ್ಪತ್ರೆ ಕಟ್ಟಡಗಳನ್ನು ಹಾಗೂ ಕಾಂಪೌಂಡ್‌ಗಳನ್ನು ತಜ್ಞರ ತಂಡ ಪರಿಶೀಲನೆ ನಡೆಸಲು ಆದೇಶಿಸಲಾಗಿದೆ ಎಂದು ವಿವರಿಸಿದರು.

ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು ಮೃತಪಟ್ಟವರಿಗೆ ಮುಖ್ಯಮಂತ್ರಿಗಳು ಈಗಾಗಲೇ ರೂ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆಯೂ ವೈದ್ಯರಿಗೆ ತಿಳಿಸಲಾಗಿದೆ. ಮುಂದೆ ಈ ರೀತಿಯ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ನಾವು ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ 8 ಸಾವು; ಹಲವು ಅವಾಂತರಗಳು
Next: ಕಾಚರಕನಹಳ್ಳಿ ಪ್ರದೇಶದಲ್ಲಿ ಆಯುಕ್ತರಿಂದ ಸ್ಥಳ ಪರಿಶೀಲನೆ

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.