ತುಮಕೂರು: ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಹಕ್ಕಿಜ್ವರದ ಬೀತಿ ಹೆಚ್ಚಾಗುತ್ತಿರುವುದರಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಹೌದು, ತುಮಕೂರು ನಗರದಲ್ಲಿ ದಿನದಿಂದ ದಿನಕ್ಕೆ ಹಕ್ಕಿಜ್ವರದ ಬೀತಿ ಹೆಚ್ಚಾಗುತ್ತಿದೆ. ಕಳೆದ ಕೆಲವು ದಿನಗಳಿಂದ ವರದಿಯಾಗಿದ್ದ ನವಿಲುಗಳ ಸರಣಿ ಸಾವುಗಳು ಬೆನ್ನಲ್ಲೇ ಇದೀಗ ಅದೇ ವ್ಯಾಪ್ತಿಯಲ್ಲಿ ಕೋಳಿಗಳ ಸಾವೂ ಸಂಭವಿಸಿದ್ದು, ಇದು ಆತಂಕ ಹೆಚ್ಚಾಗುವಂತೆ ಮಾಡಿದೆ.
ಹಕ್ಕಿ ಜ್ವರವೇ 44 ನವಿಲುಗಳ ಸಾವಿಗೆ ಕಾರಣ ಎಂದು ಈಗಾಗಲೇ ದೃಢಪಟ್ಟಿದ್ದು, ಈಗ ಕೋಳಿಗಳ ಸಾವಿಗೂ ಅದೇ ಕಾರಣವಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಕಳೆದ ಏಪ್ರಿಲ್ 16ರಿಂದ ತುಮಕೂರು ತಾಲೂಕಿನಾದ್ಯಂತ ನವಿಲುಗಳ ಸರಣಿ ಸಾವು ಆರಂಭವಾಗಿತ್ತು. ಕೇವಲ 11 ದಿನಗಳಲ್ಲಿ ಬರೋಬ್ಬರಿ 44 ನವಿಲುಗಳು ಮೃತಪಟ್ಟಿದ್ದವು. ಆರಂಭದಲ್ಲಿ ಜಿಲ್ಲೆಯಲ್ಲಿ ತಾಪಮಾನ ಏರುತ್ತಿದ್ದ ಕಾರಣ, ಅತಿಯಾದ ಶಾಖ ಮತ್ತು ನಿರ್ಜಲೀಕರಣದಿಂದ ಈ ಸಾವುಗಳು ಸಂಭವಿಸಿರಬಹುದು ಎಂದು ಶಂಕಿಸಲಾಗಿತ್ತು. ಆದರೆ, FSL ವರದಿಯಲ್ಲಿ ಹಕ್ಕಿ ಜ್ವರದ ಸೋಂಕಿನಿಂದಲೇ ನವಿಲುಗಳು ಸಾವನ್ನಪ್ಪಿವೆ ಎಂದು ದೃಢಪಟ್ಟಿದೆ. ಇದನ್ನೂ ಓದಿ: ರಾಷ್ಟ್ರೀಯ ಜೈವಿಕ ಉದ್ಯಮಶೀಲತಾ ಸ್ಪರ್ಧೆಯ 9ನೇ ಆವೃತ್ತಿಗೆ ಚಾಲನೆ
ಇದೀಗ ಜಿಲ್ಲೆಯ ಬೊಮ್ಮನಹಳ್ಳಿ ಗ್ರಾಮದ ಕೋಳಿ ಫಾರಂನಲ್ಲಿ ಏಕಾಕಾಲದಲ್ಲಿ ಸುಮಾರು 30 ಕೋಳಿಗಳು ಸಾವನ್ನಪ್ಪಿದ್ದು, ಈ ಘಟನೆ ಹಕ್ಕಿಜ್ವರದ ಅನುಮಾನಕ್ಕೆ ಕಾರಣವಾಗಿದೆ.
