ಬೆಂಗಳೂರು: ಮೇ 4ರಂದು ಚುನಾವಣೆ ಫಲಿತಾಂಶ ಹೊರಬೀಳಲಿದ್ದು, ನಾನು ಯಾವುದೇ ರಾಜ್ಯದ ಚುನಾವಣೋತ್ತರ ಸಮೀಕ್ಷೆ ನಂಬೋದಿಲ್ಲ ನನ್ನ ತಂತ್ರವೇ ಬೇರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.
ನಗರದಲ್ಲಿ ಇಂದು (ಶನಿವಾರ ಮೇ 02) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಎಲ್ಲ ರಾಜ್ಯದಲ್ಲೂ ಕೂಡ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಹಾಗಾಗಿ ನಾನು ಯಾವುದೇ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ನಂಬುವುದಿಲ್ಲ ಎಂದು ಹೇಳಿದ್ದಾರೆ.
ನಾನು ಇಲ್ಲಿಗೆ ಬಂದಿರುವುದೇ ನಮ್ಮ ಶಾಸಕರನ್ನು ರಕ್ಷಿಸಿ, ಮಾರ್ಗದರ್ಶನ ನೀಡಿ, ಶಕ್ತಿ ತುಂಬಲು ಎಂದು ತಿಳಿಸಿದರು. ಇದನ್ನೂ ಓದಿ: ಸುತ್ತೂರು ಶ್ರೀಕ್ಷೇತ್ರಕ್ಕೆ ಬಿವೈವಿ ಭೇಟಿ
ಅಸ್ಸಾಂ ಚುನಾವಣೆ ಬಗ್ಗೆ ಮಾತನಾಡಿ, ನಮ್ಮ ಕಾರ್ಯಕರ್ತರು ಬಹಳ ವಿಭಿನ್ನ. ಹೀಗಾಗಿ ಅಸ್ಸಾಂನಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ನಮ್ಮ ನಾಯಕರ ಮೇಲೆ ನಮಗೆ ನಂಬಿಕೆ ಇದೆ. ಅವರು ಸಾಕಷ್ಟು ಪರಿಶ್ರಮ ಹಾಕಿದ್ದಾರೆ. ಮತದಾರರ ಮೇಲೆ ವಿಶ್ವಾಸವಿದೆ. ಅವರಿಗೆ ಬದಲಾವಣೆ ಬೇಕಾಗಿದೆ. ಆ ಬದಲಾವಣೆ ಸಿಗಲಿದೆ ಎಂಬ ಆತ್ಮವಿಶ್ವಾಸವಿದೆ ಎಂದರು.
