ಬೆಂಗಳೂರು: ಆನೇಕಲ್ ವಿಧಾನಸಭಾ ಕ್ಷೇತ್ರದ ಚಂದಾಪುರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (RTO) ಕಚೇರಿ ಮತ್ತು ಜಪ್ತಿ ಮಾಡಿದ ವಾಹನಗಳ ನಿಲುಗಡೆ ಸ್ಥಳದ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಉದ್ಘಾಟನೆ ಮಾಡಿದರು.
ನಂತರ ಮಾತನಾಡಿದ ಅವರು, ಈ ಭಾಗದ ನಾಗರಿಕರಿಗೆ ಸಾರಿಗೆ ಇಲಾಖೆಯ ಸೇವೆಗಳು ಇನ್ನು ಮುಂದೆ ಸುಲಭವಾಗಿ ಮತ್ತು ತ್ವರಿತವಾಗಿ ಲಭ್ಯವಾಗಲಿವೆ ಎಂದು ಹೇಳಿದರು.
ನಮ್ಮ ಸರ್ಕಾರವು ಆಡಳಿತದಲ್ಲಿ ಪಾರದರ್ಶಕತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸದಾ ಬದ್ಧವಾಗಿದೆ ಎಂದರು. ಇದನ್ನೂ ಓದಿ: ನಾನು ಯಾವುದೇ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ನಂಬುವುದಿಲ್ಲ: ಡಿಕೆಶಿ
ಈ ಸಂದರ್ಭದಲ್ಲಿ ಆನೇಕಲ್ ಶಾಸಕರಾದ ಬಿ. ಶಿವಣ್ಣ ಅವರು ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
