ಚೆನ್ನೈ: ಇಂದು ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಹೊರಬೀಳಲಿದ್ದು ಪಂಚ ರಾಜ್ಯಗಳಲ್ಲೂ ಹಾವು ಏಣಿ ಆಟ ನಡೆಯುತ್ತಿದೆ. ಅಲ್ಲದೆ ಪ್ರತಿ ಅಭ್ಯರ್ಥಿಯ ಎದೆಯಲ್ಲಿ ಢವಢವ ಶುರುವಾಗಿದೆ.
ಹೌದು, ಇಂದು (ಸೋಮವಾರ ಮೇ 4) ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ಜೊತೆಗೆ ಕರ್ನಾಟಕ ರಾಜ್ಯದಲ್ಲೂ ಕೂಡ ಎರಡು ಕ್ಷೇತ್ರದಲ್ಲಿ ಉಪಚುನಾವಣೆಯ ಫಲಿತಾಂಶ ಹೊರಬೀಳಲಿದೆ.
ಇನ್ನು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮಿಳು ಚಿತ್ರರಂಗದ ನಟ ದಳಪತಿ ವಿಜಯ್ ಅವರು ಇತ್ತೀಚಿಗಷ್ಟೇ ಹೊಸ ಪಕ್ಷ ಕಟ್ಟಿ ತಮಿಳುನಾಡಿನಲ್ಲಿ ಅಧಿಕಾರದ ಗದ್ದುಗೆ ಏರಲು ತಯಾರಿ ನಡೆಸಿದ್ದಾರೆ.
ಈಗಾಗಲೇ ಎಲ್ಲಾ ಕಡೆಯಿಂದ ನೋಡಿದರೂ ಕೂಡ ವಿಜಯ್ ಅವರಿಗೆ ಬಹುಮತ ಸಿಕ್ಕಿದ್ದು, ವಿಜಯ್ ಅವರ ಗೆಲುವಿಗಾಗಿ ನಟಿ ತ್ರಿಷಾ ಕೃಷ್ಣನ್ ಅವರು ಇಂದು ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಯೆಸ್.. ನಟ ದಳಪತಿ ವಿಜಯ್ ಹಾಗೂ ನಟಿ ತ್ರಿಷಾ ಅವರು ಮದುವೆಯಾಗುತ್ತಾರೆ ಎಂಬ ಸುದ್ದಿ ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಇದೀಗ ವಿಜಯ ಗೆಲುವಿಗಾಗಿ ತಮ್ಮ ಹುಟ್ಟು ಹಬ್ಬದ ದಿನದಂದೇ ನಟಿ ತ್ರಿಷಾ ಅವರು ತಿರುಪತಿ ತಿಮ್ಮಪ್ಪನ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿರುವುದು ಅಭಿಮಾನಿಗಳಲ್ಲಿ ಇನ್ನಷ್ಟು ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಸಿಎಂ ಪಟ್ಟ ಅಲಂಕರಿಸಲು ತಯಾರಾದ ವಿಜಯ!
ಇನ್ನು ಸೋಷಿಯಲ್ ಮೀಡಿಯಾದಲ್ಲಿ ನಟಿ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಭೇಟಿ ಕೊಟ್ಟಿರುವ ವಿಡಿಯೋ ವೈರಲ್ ಆಗಿದೆ. ಫಲಿತಾಂಶದ ದಿನವೇ ನಟಿ ತಿರುಪತಿಗೆ ಭೇಟಿ ಕೊಟ್ಟಿರುವುದು ಇನ್ನಷ್ಟು ಲಿಂಕ್ ಸಿಕ್ಕಂತಾಗಿದೆ.
