ಬೆಂಗಳೂರು: ಪಂಚ ರಾಜಗಳ ಚುನಾವಣೆ ಫಲಿತಾಂಶ ಇಂದು ಹೊರಬೀಳಲಿದ್ದು ತಮಿಳುನಾಡಿನಲ್ಲಿ ಹೊಸದಾಗಿ ಪಕ್ಷ ಕಟ್ಟಿ ರಾಜಕೀಯ ರಂಗಕ್ಕೆ ಎಂಟ್ರಿ ನೀಡಿದ ವಿಜಯ್ ಅವರಿಗೆ ತಮಿಳುನಾಡಿನಲ್ಲಿ ಭಾರಿ ಮುನ್ನಡೆ ಸಿಕ್ಕಿದೆ.
ಹೌದು, ತಮಿಳುನಾಡಿನಲ್ಲಿ ಹೊಸದಾಗಿ ಟಿವಿಕೆ ಪಕ್ಷ ಕಟ್ಟಿದ ದಳಪತಿ ವಿಜಯ್ ಅವರಿಗೆ ಮತದಾನ ಬಾಂಧವರು ವಿಜಯವರಿಗೆ ಬಹುಮತ ನೀಡುವ ಮೂಲಕ ಅವರನ್ನು ಗೆಲ್ಲಿಸಿದ್ದಾರೆ.
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯ್ ಅವರಿಗೆ ಶುಭ ಕೋರಿದ್ದಾರೆ.
ನಗರದಲ್ಲಿ ಇಂದು (ಸೋಮವಾರ ಏಪ್ರಿಲ್ 4) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಆಡಳಿತ ವಿರೋಧಿ ಅಲೆ ಇರಬಹುದು. ಇನ್ನೂ ಟಿವಿಕೆ ಹೊಸ ಪಕ್ಷ ವಿಜಯ್ ಅಲೆಯಿಂದ ಮುನ್ನಡೆ ಸಾಧಿಸಿರಬಹುದು ಎಂದರು. ಬಳಿಕ ವಿಜಯ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ: 2 ಕ್ಷೇತ್ರಗಳಲ್ಲಿ ಗೆಲುವು: ಸಿಎಂ ವಿಶ್ವಾಸ
ದಕ್ಷಿಣ ಭಾರತದ ಪ್ರಮುಖ ರಾಜ್ಯಗಳಲ್ಲೊಂದಾದ ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಏ.23 ರಂದು ಮತದಾನ ನಡೆದಿತ್ತು. ರಾಜ್ಯದಲ್ಲಿ ದಾಖಲೆಯ 4,654 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಪೈಕಿ 3,579 ಪುರುಷ ಮತ್ತು 443 ಮಹಿಳಾ ಮತದಾರರು ಸ್ಪರ್ಧಿಸಿದ್ದರು. 84.69% ಮತದಾನ ನಡೆದಿತ್ತು. ರಾಜ್ಯದಲ್ಲಿ ಬಹುಮತಕ್ಕೆ 118 ಸ್ಥಾನಗಳು ಬೇಕಿದ್ದವು. ರಾಜ್ಯದಲ್ಲಿ ಆಡಳಿತಾರೂಢ ಡಿಎಂಕೆ ಮೈತ್ರಿಕೂಟ, ಎಐಎಡಿಎಂಕೆ ಮೈತ್ರಿಕೂಟ, ನಟ ವಿಜಯ್ ನೇತೃತ್ವದ ಟಿವಿಕೆ, ಎನ್‌ಟಿಕೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದವು.
