ಬೆಂಗಳೂರು: ಪಂಚ ರಾಜ್ಯಗಳ ಚುನಾವಣೆಯಲ್ಲಿ ಮೂರು ರಾಜ್ಯಗಳಾದ ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಸಾಧಿಸಿದ ಐತಿಹಾಸಿಕ ಹಾಗೂ ಭರ್ಜರಿ ವಿಜಯಕ್ಕಾಗಿ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ಬಿ, ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಸಿಟಿ ರವಿ ಚಲವಾದಿ ನಾರಾಯಣ ಸ್ವಾಮಿ ಸೇರಿದಂತೆ ಬಿಜೆಪಿ ಮುಖಂಡರು ಸೇರಿಕೊಂಡು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
ನಂತರ ಮಾತನಾಡಿದ ಆರ್ ಅಶೋಕ್, ಕೇಂದ್ರ ಸರ್ಕಾರದ ಅಭಿವೃದ್ಧಿಪರ ದೃಷ್ಟಿಕೋನ ಮತ್ತು ಪ್ರಧಾನಮಂತ್ರಿ ಅವರ ದಿಟ್ಟ ನಾಯಕತ್ವ, ಜನಪರ ಆಡಳಿತದ ಮೇಲೆ ದೇಶದ ಜನತೆ ಮತ್ತೊಮ್ಮೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದರು. ಇದನ್ನೂ ಓದಿ: ಬೈ ಎಲೆಕ್ಷನ್; ಗೆಲುವಿನ ನಗೆ ಬೀರಿದ ಸಮರ್ಥ್ ಶಾಮನೂರು
ಪ್ರಮುಖವಾಗಿ ಪಶ್ಚಿಮ ಬಂಗಾಳದ ಜನರು ಬಿಜೆಪಿ ಬೆಂಬಲಿಸುವ ಮೂಲಕ ದುರಾಡಳಿತಕ್ಕೆ ತಕ್ಕ ಉತ್ತರ ನೀಡಿ, ಬದಲಾವಣೆಯ ಪರ್ವ ಸೃಷ್ಟಿಸಿದ್ದಾರೆ. ಪಶ್ಚಿಮ ಬಂಗಾಳವನ್ನು ಭಯೋತ್ಪಾದಕರ ಹೆಬ್ಬಾಗಿಲಾಗಿಸಿದ, ಬಾಂಗ್ಲಾ ವಲಸಿಗರಿಗೆ ಗುರುತಿನ ಚೀಟಿ ಕೊಟ್ಟ ಮಮತಾ ಬ್ಯಾನರ್ಜಿ ಅವರ ರಾಜಕೀಯ ಬದುಕು ಅಂತ್ಯಗೊಂಡಿದೆ. ದೇಶದ ಭದ್ರತೆಗೆ ಪ್ರಧಾನಿ ನರೇಂದ್ರ ಮೋದಿಯೇ ಸೂಕ್ತ ಎಂದು ಜನರು ತೀರ್ಮಾನಿಸಿದ್ದಾರೆ. ಭಾರತೀಯ ಜನಸಂಘದ ಸ್ಥಾಪಕರಾದ ಡಾ.ಶ್ಯಾಮ ಪ್ರಸಾದ್ ಮುಖರ್ಜಿಯವರ ರಾಷ್ಟ್ರಭಕ್ತಿಯ ತತ್ವಗಳು ಹಾಗೂ ಏಕತಾ ಸಂದೇಶ ಇಂದು ಬಿಜೆಪಿಯ ಈ ವಿಜಯಗಳಲ್ಲಿ ಸ್ಪಷ್ಟವಾಗಿ ಪ್ರತಿಫಲಿಸುತ್ತಿವೆ ಎಂದರು.
