ಹಾವೇರಿ: ಪಲ್ಲಕ್ಕಿ ಬಸ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಬಳಿ ರಾಜ್ಯ ಹೆದ್ದಾರಿ ಬಳಿ ಇಂದು (ಮಂಗಳವಾರ ಮೇ 5) ಬೆಳಿಗ್ಗೆ ನಡೆದಿದೆ.
ಬೆಂಗಳೂರಿನಿಂದ 17 ಜನಗಳನ್ನು ಹೊತ್ತು ಒಯ್ಯುತ್ತಿದ್ದ ಪಲ್ಲಕ್ಕಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮವಾಗಿ ಚಾಲಕನ ಸಮಯಪ್ರತಿಯಿಂದ 17 ಜನ ಪ್ರಯಾಣಿಕರು ಪ್ರಾಣ ಅಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ ಗದಗ ಹೊರಟಿದ್ದ (KA-57-F6680) ಸಂಖ್ಯೆಯ ಪಲ್ಲಕ್ಕಿ ಬಸ್ನಲ್ಲಿ ಸುಮಾರು 17 ಹೆಚ್ಚು ಪ್ರಯಾಣಿಕರು ಗದಗ ಕಡೆಗೆ ಪ್ರಯಾಣಿಸುತ್ತಿದ್ದರು. ಬ್ರೇಕ್ ಲೈನ್ ದೋಷದಿಂದ ಬೆಂಕಿ ಅವಘಡ ಸಂಭವಿಸಿದ್ದು ಎನ್ನಲಾಗಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳದ ಜನರು ಬಿಜೆಪಿ ಬೆಂಬಲಿಸುವ ಮೂಲಕ ದುರಾಡಳಿತಕ್ಕೆ ತಕ್ಕ ಉತ್ತರ ನೀಡಿದೆ: ಆರ್ ಅಶೋಕ್
ಬಸ್ ಚಾಲಕ ಪಕ್ಕೀರಪ್ಪ ಬೆಂಕಿ ನಂದಿಸಲು ಹರಸಹಾಸ ಪಟ್ಟಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
