ಚಿತ್ರದುರ್ಗ: ಚಿತ್ರದುರ್ಗದ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಇಂದು (ಮಂಗಳವಾರ ಮೇ. 05) ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನ ಸಂಸದ ಗೋವಿಂದ್ ಕಾರಜೋಳ ವಹಿಸಿ, ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಗಳು ಹಾಗೂ ಕೈಗೊಂಡಿರುವ ಕ್ರಮಗಳ ಕುರಿತು ಸಮಗ್ರ ಚರ್ಚೆ ನಡೆಸಿದರು.
ನಂತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯ ಪ್ರತಿಯೊಂದು ಹಳ್ಳಿಗೂ ಶುದ್ಧ ಕುಡಿಯುವ ನೀರು ತಲುಪಿಸುವುದು ಮತ್ತು ನೈರ್ಮಲ್ಯ ವ್ಯವಸ್ಥೆಯನ್ನು ಬಲಪಡಿಸುವುದು ನಮ್ಮ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಲಾಗಿದ್ದು, ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ತಿಳಿಸಿದರು. ಇದನ್ನೂ ಓದಿ: ಕೇವಲ ಒಂದೇ ಒಂದು ಮತ ಸಚಿವರನ್ನೇ ಬುಡಮೇಲು ಮಾಡಿದ ಸಾಮಾನ್ಯ ವ್ಯಕ್ತಿ ಶ್ರೀನಿವಾಸ ಸೇತುಪತಿ
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
