ಕೋಲ್ಕತ್ತಾ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಇಡೀ ದೇಶದ ಗಮನ ಸೆಳೆದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಕೇಸರಿ ಪಡೆ ತನ್ನ ಕಮಲವನ್ನು ಅರಳಿಸಿದ್ದು, ಇದೀಗ ಮಮತಾ ಬ್ಯಾನರ್ಜಿ ಅವರ ಮನೆಗೆ ಭದ್ರತೆ ನೀಡಿದ ಎಲ್ಲವನ್ನು ಇದೀಗ ಕಡಿತಗೊಳಿಸಲಾಗಿದೆ.
ಹೌದು, ಪಶ್ಚಿಮ ಬಂಗಾಳದ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಇದೀಗ ಮಮತಾ ಬ್ಯಾನರ್ಜಿ ಅವರ ನಿವಾಸದ ಸುತ್ತಮುತ್ತಲು ಇದ್ದ ಸರ್ಕಾರದ ಭದ್ರತೆಯನ್ನು ಕಡಿತಗೊಳಿಸಿ ಸಾರ್ವಜನಿಕರ ಓಡಾಟಕ್ಕೆ ಅನುವು ಮಾಡಿಕೊಡಲಾಗಿದೆ. ಇದನ್ನೂ ಓದಿ: ಡಿಸಿಎಂ ಭೇಟಿ ಮಾಡಿದ ಶಾಸಕ ಉಮೇಶ್ ಮೇಟಿ
ಕೋಲ್ಕತ್ತಾದ ಕಾಳಿಘಾಟ್ನಲ್ಲಿರುವ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ನೀಡಲಾಗಿದ್ದ ಭದ್ರತೆಯನ್ನು ಕಡಿತಗೊಳಿಸಲಾಗಿದ್ದು, ಹಿಂದೆ ಮುಖ್ಯಮಂತ್ರಿಗಳ ನಿವಾಸಕ್ಕೆ ಇದ್ದ ಭಾರೀ ಭದ್ರತೆ ಕಡಿತಗೊಳಿಸಲಾಗಿದೆ. ಮಮತಾ ನಿವಾಸದ ರಸ್ತೆಗೆ ಅಡ್ಡಲಾಗಿ ಹಾಕಲಾಗಿದ್ದ ಬ್ಯಾರಿಕೇಡ್ಗಳನ್ನು ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ರಸ್ತೆಯಲ್ಲಿ ಓಡಾಡಲು ಮುಕ್ತ ಅವಕಾಶ ಕಲ್ಪಿಸಲಾಗಿದೆ.
