ಬೆಂಗಳೂರು: ಕನ್ನಡ ಚಿತ್ರರಂಗದ ಡಾ. ರಾಜಕುಮಾರ್ ಅವರ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದಕ್ಕೆ ಸಂಬಂಧಿಸಿದಂತೆ ಇದೀಗ ನಟ ಚೇತನ್ ಅಹಿಂಸಾ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹೌದು, ಕಳೆದ ಕೆಲ ದಿನಗಳ ಹಿಂದೆ ನಟ ಚೇತನ್ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ನಿರ್ಮಾಪಕ ಸಾರಾ ಗೋವಿಂದು ವಿರುದ್ಧ ದೂರು ನೀಡಿದ್ದರು. ದೂರಿನನ್ವಯ ಎಫ್ಐಆರ್ ಕೂಡ ದಾಖಲಾಗಿತ್ತು. ಇದೀಗ ಸಾರಾ ಗೋವಿಂದು ಅವರು ಕೂಡ ನಟ ಚೇತನ್ ವಿರುದ್ಧ ದಾಖಲಿಸಿದ್ದು, ದೂರಿನನ್ವಯ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ವಿಪಕ್ಷಗಳ ಯಾವುದೇ ತಂತ್ರಗಾರಿಕೆ ನಡೆಯುವುದಿಲ್ಲ: ಸಿಎಂ
ಈಗಾಗಲೇ ಇಬ್ಬರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ವಿಡಿಯೋ ಸಂಗ್ರಹಿಸಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಬಗ್ಗೆ ಸಾಕ್ಷಿ ಕಲೆ ಹಾಕಿದ ನಂತರ ನೋಟಿಸ್ ನೀಡಲು ಪೊಲೀಸರು ಚಿಂತಿಸಿದ್ದು, ಹೇಳಿಕೆ ದಾಖಲು ಮಾಡಿಕೊಳ್ಳಲಿದ್ದಾರೆ.
