Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜಿಲೆಟಿನ್ ಕಡ್ಡಿ ಪತ್ತೆ ಪ್ರಕರಣ ತನಿಖೆ ಚುರುಕು
  • Bangalore
  • Crime
  • Politics
  • State

ಜಿಲೆಟಿನ್ ಕಡ್ಡಿ ಪತ್ತೆ ಪ್ರಕರಣ ತನಿಖೆ ಚುರುಕು

Praja Vahini May 11, 2026
WhatsApp Image 2026-05-11 at 11.30.02
Spread the love

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ (ಭಾನುವಾರ ಮೇ 10) ರಂದು ರಾಜ್ಯದ ರಾಜಧಾನಿ ಬೆಂಗಳೂರು ನಗರಕ್ಕೆ ಆಗಮಿಸಿ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ರವಿಶಂಕರ್ ಗುರುಜಿ ಅವರ 70ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮಾಚರಣೆ ಜೊತೆಗೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ನರೇಂದ್ರ ಮೋದಿ ಅವರು ಬಂದಿದ್ದ ಸುತ್ತಮುತ್ತಲಿನ ತಳದಲ್ಲಿಯೇ ಜಿಲೆಟಿನ್ ಕಡ್ಡಿಪುಡಿ ಪತ್ತೆ ಆಗಿರೋದು ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ.

ಹೌದು, ಬೆಂಗಳೂರಿನ ಕಗ್ಗಲಿಪುರ ಸುತ್ತಮುತ್ತಲಿನಲ್ಲಿ ಜಿಲೆಟಿನ್ ಕಡ್ಡಿಪುಡಿಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇದೀಗ 4 ತಂಡಗಳನ್ನು ನಿರ್ಮಿಸಿ ತನಿಖೆ ಮುಂದುವರಿಸಿದ್ದಾರೆ.

ಇನ್ನು ಬೆಂಗಳೂರು ನಗರ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಜಿಲೆಟಿನ್ ಕಡ್ಡಿಗಳನ್ನು ಬಿಸಾಡಿದ ವ್ಯಕ್ತಿಯ ಪತ್ತೆಗೆ ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ. ಜಿಲೆಟಿನ್ ಪತ್ತೆಯಾದ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಇನ್ಮುಂದೆ ನಾವು 101 ಜಾತಿಯ ಸಮುದಾಯದವರು ಅಣ್ಣ ತಮ್ಮಂದಿರಂತೆ: ಕೆಹೆಚ್. ಮುನಿಯಪ್ಪ

ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ಹಿನ್ನೆಲೆ ಆಶ್ರಮದ ಸುತ್ತಮುತ್ತ ಭಾರೀ ಭದ್ರತೆ ಕಲ್ಪಿಸಲಾಗಿದ್ದರೂ, ಆಶ್ರಮಕ್ಕೆ ಸಮೀಪದ ರಸ್ತೆಯಲ್ಲೇ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವುದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಕಾರ್ಯಕ್ರಮ ಆರಂಭಕ್ಕೂ 2 ಗಂಟೆಗಳ ಮುನ್ನವೇ ಜಿಲೆಟಿನ್ ಪತ್ತೆಯಾಗಿರುವ ಹಿನ್ನೆಲೆ ಪ್ರಕರಣಕ್ಕೆ ಮತ್ತಷ್ಟು ಗಂಭೀರತೆ ಬಂದಿದೆ.

ಅನುಮಾನಾಸ್ಪದವಾಗಿ ಓಡಾಡಿದ್ದ ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಜಿಲೆಟಿನ್ ಕಡ್ಡಿಗಳು ಅಲ್ಲಿಗೆ ಹೇಗೆ ಬಂದವು ಎಂಬುದರ ಬಗ್ಗೆ ತನಿಖಾ ತಂಡಗಳು ಹಲವು ಆಯಾಮಗಳಲ್ಲಿ ಪರಿಶೀಲನೆ ನಡೆಸುತ್ತಿವೆ.

ಬೆಂಗಳೂರು ದಕ್ಷಿಣ ಜಿಲ್ಲಾ ಎಸ್ಪಿ ಶ್ರೀನಿವಾಸ ಗೌಡ ನೇತೃತ್ವದಲ್ಲಿ ತನಿಖೆ ಮುಂದುವರಿದಿದ್ದು, ಪ್ರಕರಣದ ಪ್ರತಿಯೊಂದು ಅಂಶವನ್ನೂ ಪೊಲೀಸರು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಇನ್ಮುಂದೆ ನಾವು 101 ಜಾತಿಯ ಸಮುದಾಯದವರು ಅಣ್ಣ ತಮ್ಮಂದಿರಂತೆ: ಕೆಹೆಚ್. ಮುನಿಯಪ್ಪ
Next: ಚಿನ್ನ ಖರೀದಿ ಮಾಡಬೇಡಿ: ಮೋದಿ ಕರೆ

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.