ಹೈದರಾಬಾದ್: ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಸೇರಿದಂತೆ ಗ್ಯಾಸ್ನ ಬೆಲೆ ಕೂಡ ಹೆಚ್ಚಾಗಿದ್ದು, ಆದಷ್ಟು ಜನ ವರ್ಕ್ ಫ್ರಮ್ ಹೋಮ್ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಕರೆ ನೀಡಿದ್ದಾರೆ.
ಹೈದರಾಬಾದಿನಲ್ಲಿ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಉತ್ಪನ್ನಗಳ ಮಿತ ಬಳಕೆ ಈಗಿನ ಅಗತ್ಯವಾಗಿದೆ. ನಾವು ಆಮದು ಮಾಡಿಕೊಂಡ ಪೆಟ್ರೋಲ್ ಉತ್ಪನ್ನಗಳನ್ನು ಅಗತ್ಯಕ್ಕೆ ತಕ್ಕಂತೆ ಮಾತ್ರ ಬಳಸಬೇಕಾಗಿದೆ. ಮನೆಯಿಂದಲೇ ಕೆಲಸ ಮಾಡಿ, ವಿದ್ಯುತ್ ವಾಹನಗಳನ್ನು ಬಳಸಿ ಇದು ವಿದೇಶಿ ವಿನಿಮಯವನ್ನು ಉಳಿಸುವುದಲ್ಲದೇ ಯುದ್ಧದ ಪ್ರತಿಕೂಲ ಪರಿಣಾಮವನ್ನು ಕಡಿಮೆ ಮಾಡಲಿದೆ ಎಂದರು. ಇದನ್ನೂ ಓದಿ: ಚಿನ್ನ ಖರೀದಿ ಮಾಡಬೇಡಿ: ಮೋದಿ ಕರೆ
ಕಳೆದ ಕೆಲವು ವರ್ಷಗಳಿಂದ, ಸೌರಶಕ್ತಿಯ ವಿಷಯದಲ್ಲಿ ಭಾರತ ವಿಶ್ವದ ಅಗ್ರ ರಾಷ್ಟ್ರಗಳಲ್ಲಿ ಸ್ಥಾನ ಪಡೆದಿದೆ. ಪೆಟ್ರೋಲ್ನಲ್ಲಿ ಎಥೆನಾಲ್ ಮಿಶ್ರಣ ಮಾಡುವಲ್ಲಿ ಅಭೂತಪೂರ್ವ ಕೆಲಸ ಮಾಡಲಾಗಿದೆ ಎಂದು ಇದೇ ವೇಳೆ ಅವರು ಒತ್ತಿ ಹೇಳಿದ್ದಾರೆ.
