ಬೆಂಗಳೂರು: ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರಿಗೆ ಮತ್ತು ಪಿಂಚಣಿದಾರರಿಗೆ ಸಿಹಿ ಸುತಿಯನ್ನು ನೀಡಿದ್ದು, ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು ಶೇ. 14.25 ರಿಂದ ಶೇ. 15.75 ಕ್ಕೆ ಏರಿಕೆ ಮಾಡಿದೆ. ಶೇ. 1.50 ರಷ್ಟು ತುಟ್ಟಿಭತ್ಯೆ ಹೆಚ್ಚಳವು 2026ರ ಜನವರಿ 1 ರಿಂದ ಪೂರ್ವಾನ್ವಯ ಆಗಲಿದೆ. ಇದರಿಂದ ಲಕ್ಷಾಂತರ ನೌಕರರು ಮತ್ತು ಪಿಂಚಣಿದಾರರಿಗೆ ಆರ್ಥಿಕವಾಗಿ ಅನುಕೂಲವಾಗಲಿದೆ.
ತುಟ್ಟಿಭತ್ಯೆ ಶೇ.14.25 ರಿಂದ 15.75ಕ್ಕೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. 2024ರ ಪರಿಷ್ಕೃತ ವೇತನ ಪಡೆಯುತ್ತಿರುವವರಿಗೆ ಇದ ಅನ್ವಯ ವಾಗಲಿದೆ. 2026 ಜನವರಿ 1ರಿಂದ ಜಾರಿಗೆ ಬರುವಂತೆ ಅನ್ವಯ.
ರಾಜ್ಯ ಸರ್ಕಾರವು ವೇತನದಾರರು, ಕುಟುಂಬ ನಿವೃತ್ತು ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾದದರಿಗೂ ಸಹ 2026ರ ಜನವರಿ 1ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ಕುಟುಂಬ ವೇತನದ ಪ್ರಸಕ್ತ ಶೇ.14ರಿಂದ ಶೇ. 15.75ಕ್ಕೆ ಹೆಚ್ಚಿಸಲಾಗಿದೆ. ಇದನ್ನೂ ಓದಿ: ರಾಮಚಂದ್ರಪ್ಪ ಅವರು ಅಂತಿಮ ದರ್ಶನ ಪಡೆದ ಡಿಸಿಎಂ
ರಾಜ್ಯ ಸರ್ಕಾರವು ಈ ನಿರ್ಧಾರ ತೆಗೆದುಕೊಂಡಿರುವುದರಿಂದ ಸರ್ಕಾರಿ ನೌಕರರ ಕುಟುಂಬಕ್ಕೆ ಒಳಿತಾಗೋದ್ರ ಜೊತೆಗೆ ಸರ್ಕಾರಿ ನೌಕರರು ಕೂಡ ಹೆಚ್ಚಿನ ಗಮನವಿಟ್ಟು ಕೆಲಸ ಮಾಡಲು ಅನುಕೂಲವಾದಂತಿದೆ.
