ಚಿತ್ರದುರ್ಗ: ಹಲವು ದಿನಗಳಿಂದ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಸಚಿವ ಡಿ ಸುಧಾಕರ್ ಅವರು ನಿನ್ನೆ (ಭಾನುವಾರ ಮೇ 10) ನಿಧನರಾಗಿದ್ದು, ಸಚಿಚ ಸುಧಕಾರ್ ಅವರ ಅಂತ್ಯಕ್ರಿಯೆಯಲ್ಲಿಇಂದು (ಸೋಮವಾರ ಮೇ. 11) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ಅಂತಿಮ ನಮನ ಸಲ್ಲಿಸಿದರು. ಇದೇ ವೇಳೆ ಮುಖ್ಯಮಂತ್ರಿಯವರು ಸುಧಾಕರ್ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಇದನ್ನೂ ಓದಿ: ಮೋದಿ ಅವರೇ ಸೆಂಟ್ರಲ್ ಮಿನಿಸ್ಟ್ರಿಗೆ ಹೇಳಿ ಸರ್ಕಾರಿ ಸಾರಿಗೆಯಲ್ಲಿ ಓಡಾಡಿ ಅಂತ: ಡಿಕೆಶಿ
ಸರ್ಕಾರಿ ಗೌರವದ ಬಳಿಕ ಮುಖ್ಯಮಂತ್ರಿಯವರು ರಾಷ್ಟ್ರಧ್ವಜವನ್ನು ಕುಟುಂಬದವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸ್ಪೀಕರ್ ಯು.ಟಿ.ಖಾದರ್, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಜಿ.ಪರಮೇಶ್ವರ್, ಈಶ್ವರ್ ಖಂಡ್ರೆ, ಹೆಚ್.ಕೆ.ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
