Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪ್ರಧಾನಿ ಅವರ ಸುಳ್ಳು, ಕೀಳು ಅಭಿರುಚಿ, ದ್ವೇಷಾಸೂಯೆಗಳ ಭಾಷಣಗಳ ಮಾಡ್ತಾರೆ: ಸಿಎಂ
  • Bangalore
  • Politics
  • State

ಪ್ರಧಾನಿ ಅವರ ಸುಳ್ಳು, ಕೀಳು ಅಭಿರುಚಿ, ದ್ವೇಷಾಸೂಯೆಗಳ ಭಾಷಣಗಳ ಮಾಡ್ತಾರೆ: ಸಿಎಂ

Praja Vahini May 11, 2026 1 minute read
WhatsApp Image 2026-05-11 at 17.36.47
Spread the love

ಬೆಂಗಳೂರು: ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ್ದು ದೇಶದ ಪ್ರಧಾನಿಯಾಗಿಯೋ? ಇಲ್ಲವೇ ರಾಜ್ಯ ಬಿಜೆಪಿ ಅಧ್ಯಕ್ಷರೋ? ಇಲ್ಲವೇ ರಾಜ್ಯದ ವಿರೋಧ ಪಕ್ಷದ ನಾಯಕರಾಗಿಯೋ? ಎನ್ನುವುದನ್ನು ಅವರೇ ಸ್ಪಷ್ಟಪಡಿಸಿ ಸಾರ್ವಜನಿಕರಲ್ಲಿ ಮೂಡಿರುವ ಗೊಂದಲವನ್ನು ಬಗೆಹರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಇಂದು (ಸೋಮವಾರ ಮೇ 11) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಯವರು ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಉದ್ದೇಶಿಸಿ ಮಾತನಾಡಿದ್ದರೂ ಅವರ ಮಾತಿನಲ್ಲಿ ಕೇಂದ್ರದಲ್ಲಿರುವ ಅವರದ್ದೇ ಸರ್ಕಾರದ  ವೈಫಲ್ಯ ಮತ್ತು ರಾಜ್ಯದಲ್ಲಿರುವ ಅವರ ಪಕ್ಷದ ದುಸ್ಥಿತಿಯಯನ್ನು ಸರಿಪಡಿಸಲಾಗದ ಅಸಹಾಯಕತೆ ಇತ್ತು. ತನ್ನ ಎಲೆ ಮೇಲೆ ಆನೆ ಸತ್ತು ಬಿದ್ದಿದ್ದರೂ ಎದುರಿನವರ ಎಲೆ ಮೇಲೆ ಸತ್ತುಬಿದ್ದ ನೊಣವನ್ನು ಹುಡುಕಾಡುವ ಢೋಂಗಿ ಬುದ್ಧಿಯೂ ಅವರ ಭಾಷಣದಲ್ಲಿ ಇತ್ತು.

ಪಂಡಿತ್ ಜವಾಹರಲಾಲ್ ನೆಹರೂ, ಇಂದಿರಾಗಾಂಧಿ, ಅಟಲ್‌ ಬಿಹಾರಿ ವಾಜಪೇಯಿಯವರೂ ಸೇರಿದಂತೆ ದೇಶದ ಪ್ರಧಾನಮಂತ್ರಿಯಾದವರು ಎಂದೂ ಕೆಟ್ಟ ರಾಜಕಾರಣಿಗಳ ರೀತಿ ಬೀದಿ ಭಾಷಣ ಮಾಡಿ ವಿರೋಧಪಕ್ಷಗಳನ್ನು ಹಳಿಯಲು ಹೋಗಿಲ್ಲ. ಅವರೆಲ್ಲರೂ ಕಾಪಾಡಿಕೊಂಡು ಬಂದಿದ್ದ ಪ್ರಧಾನಿ ಕುರ್ಚಿಯ ಘನತೆ, ಗಾಂಭಿರ್ಯ ಮತ್ತು ಔಚಿತ್ಯವನ್ನು ನರೇಂದ್ರ ಮೋದಿಯವರು ತಮ್ಮ ಸುಳ್ಳು, ಕೀಳು ಅಭಿರುಚಿ ಮತ್ತು ದ್ವೇಷಾಸೂಯೆಗಳನ್ನು ವ್ಯಕ್ತಪಡಿಸುವ ಭಾಷಣಗಳ ಮೂಲಕ ಮಣ್ಣುಪಾಲು ಮಾಡುತ್ತಿದ್ದಾರೆ. ಬೆಂಗಳೂರಿಗೆ ಬಂದಿದ್ದ ಮೋದಿಯವರು ಇನ್ನೂ ಪಂಚ ರಾಜ್ಯಗಳ ಚುನಾವಣಾ ರ‌್ಯಾಲಿಯಗಳ ಗುಂಗಿನಲ್ಲಿಯೇ ಇದ್ದಂತೆ ಕಂಡರು. ಇದನ್ನೂಓದಿ: ಕಾಂಗ್ರೆಸ್ ನವರಿಗೆ ತ್ಯಾಗ, ದೇಶ ಭಕ್ತಿ ಅನ್ನುವುದೇ ಗೊತ್ತಿಲ್ಲ: ಬೊಮ್ಮಾಯಿ

2024-25ರಲ್ಲಿಯೇ ಭಾರತವನ್ನು 5 ತ್ರಿಲಿಯನ್ ಡಾಲರ್ ಆರ್ಥಿಕತೆಯ ದೇಶ ಮಾಡುವೆ ಎಂದು ಕೊಚ್ಚಿಕೊಂಡಿದ್ದ, ಭಾರತದ ಅಭಿವೃದ್ದಿ ರಥ ನಾಗಾಲೋಟದಿಂದ ಮುಂದೋಡುತ್ತಿದೆ ಎಂದು ಬೀಗಿದ್ದ ಮತ್ತು ದೇಶದ ಬಡತನವನ್ನು ನಿರ್ಮೂಲನೆ ಮಾಡಿ ಆಗಿದೆ ಎಂದು ತನ್ನ ಬೆನ್ನನ್ನು ತಾನೇ ಚಪ್ಪರಿಸಿಕೊಂಡಿದ್ದ ಪ್ರಧಾನಿಯವರು ಈಗ ಚಿನ್ನ ಖರೀದಿಸಬೇಡಿ, ಪೆಟ್ರೋಲ್ ಮತ್ತು ಖಾದ್ಯ ಎಣ್ಣೆ ಕಡಿಮೆ ಬಳಸಿ, ವಿದೇಶ ಪ್ರವಾಸ ಮಾಡಬೇಡಿ ಮತ್ತು ಗೊಬ್ಬರ ಬಳಕೆ ತಗ್ಗಿಸಿ ಎಂದು ಬೇಡಿಕೊಳ್ಳುತ್ತಿರುವುದು ಯಾವ ಅಭಿವೃದ್ದಿಯ ಲಕ್ಷಣ ಎನ್ನುವುದನ್ನು ಮೋದಿಯವರೇ ಸ್ಪಷ್ಟಪಡಿಸಬೇಕು ಎಂದರು.

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಖಾದ್ಯತೈಲ ಎಲ್ಲವೂ ದುಬಾರಿಯಾಗಿ ದೇಶದ ಜನರ ನಿತ್ಯದ ಜೀವನ ನಿರ್ವಹಣೆಗಾಗಿ ಪರದಾಡುವಂತಹ ಪರಿಸ‍್ಥಿತಿ ನಿರ್ಮಾಣಕ್ಕೆ ದೇಶದ ಎಡಬಿಡಂಗಿ ವಿದೇಶಾಂಗ ನೀತಿ ಕಾರಣ ಎನ್ನುವುದನ್ನು ಅರಿತುಕೊಳ್ಳುವಷ್ಟು ಜನತೆ ಪ್ರಬುದ್ಧರಾಗಿದ್ದಾರೆ. ಇರಾನ್ ವಿರುದ್ಧ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ನಡೆಸುತ್ತಿರುವ ಯುದ್ಧದ ನಡುವೆ ಭಾರತ ಸಿಕ್ಕಿಹಾಕಿಕೊಂಡು ಒದ್ದಾಡುತ್ತಿದೆ. ಇಂತಹ ಸಂದರ್ಭದಲ್ಲಿ ನ್ಯಾಯ ಮತ್ತು ನೀತಿಯ ಪರವಾಗಿ ಗಟ್ಟಿಯಾದ ನಿಲುವು ತೆಗೆದುಕೊಂಡಿದ್ದರೆ ಭಾರತ ಇಂದಿನ ದುಸ್ಥಿತಿಯನ್ನು ಎದುರಿಸುತ್ತಿರಲಿಲ್ಲ. ಮೋದಿಯವರೇ, ಈ ವೈಫಲ್ಯಕ್ಕೆ ಯಾರನ್ನು ದೂರುತ್ತೀರಿ? ಜವಾಹರಲಾಲ್ ನೆಹರೂ ಅವರನ್ನೇ? ಕಾಂಗ್ರೆಸ್ ಪಕ್ಷವನ್ನೇ? ಉತ್ತರಿಸಿ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಕಾಂಗ್ರೆಸ್ ನವರಿಗೆ ತ್ಯಾಗ, ದೇಶ ಭಕ್ತಿ ಅನ್ನುವುದೇ ಗೊತ್ತಿಲ್ಲ: ಬೊಮ್ಮಾಯಿ
Next: ಮಾಜಿ ಸಿಎಂ ಸ್ಟಾಲಿನ್ ಭೇಟಿ ಮಾಡಿದ ಸಿಎಂ ವಿಜಯ್

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.