ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಜೋಸೆಫ್ ವಿಜಯವರು ಮಾಜಿ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರನ್ನು ಭೇಟಿ ಮಾಡಿದ್ದಾರೆ.
ಹೌದು, ನಿನ್ನೆ ಅದ್ದೂರಿಯಾಗಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವನ್ನು ನೆರವೇರಿಸಿದ ನಂತರ ಇಂದು (ಸೋಮವಾರ ಮೇ 11) ಮತ್ತೆ ಪ್ರಮಾಣವಚನ ಸ್ವೀಕರಿಸಿದ ವಿಜಯ್ ಅವರು ತಮಿಳುನಾಡಿನ ಮಾಜಿ ಸಿಎಂ ಎಂ ಕೆ ಸ್ಟಾಲಿನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಖುದ್ದು ಸ್ಟಾಲಿನ್ ಅವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ಟಾಲಿನ್ ನವರು ವಿಜಯವರಿಗೆ ಹೂಗುಚ್ಛ ನೀಡುವ ಮೂಲಕ ಸ್ವಾಗತ ಕೋರಿದರು. ಇದನ್ನೂ ಓದಿ: ಪ್ರಧಾನಿ ಅವರ ಸುಳ್ಳು, ಕೀಳು ಅಭಿರುಚಿ, ದ್ವೇಷಾಸೂಯೆಗಳ ಭಾಷಣಗಳ ಮಾಡ್ತಾರೆ: ಸಿಎಂ
ಏಪ್ರಿಲ್ 23ರ ಚುನಾವಣೆಗೆ ಮುಂಚಿತವಾಗಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು ಡಿಎಂಕೆ ತೀವ್ರ ಚುನಾವಣಾ ಸ್ಪರ್ಧೆಯಲ್ಲಿ ತೊಡಗಿತ್ತು. ವಿಜಯ್ ಕೂಡ ಡಿಎಂಕೆ ವಿರುದ್ಧ ಸಾಕಷ್ಟು ವಾಗ್ದಾಳಿ ನಡೆಸಿದ್ದರು. ನಿನ್ನೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವಾಗಲೂ ಸಿಎಂ ವಿಜಯ್ ಡಿಎಂಕೆ ಸರ್ಕಾರ ಭಾರೀ ಸಾಲ ಮಾಡಿ ಹೋಗಿದೆ ಎಂದು ಆರೋಪಿಸಿದ್ದರು. ಇದಕ್ಕೆ ಸ್ಟಾಲಿನ್ ಕೂಡ ತಿರುಗೇಟು ನೀಡಿದ್ದರು. ಅದರ ಬೆನ್ನಲ್ಲೇ ಇಬ್ಬರೂ ನಾಯಕರು ಮುಖಾಮುಖಿ ಭೇಟಿಯಾಗಿದ್ದಾರೆ.
