ಬೆಂಗಳೂರು: ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಧರ್ಮದರ್ಶಿಗಳಾದ ಪ್ರಶಾಂತ್ ಎಸ್. ನಾಯರ್ ಹಾಗೂ ಅವರ ಸಂಗಡಿಗರು ಇಂದು (ಮಂಗಳವಾರ ಮೇ 12) ಬೆಂಗಳೂರಿನಲ್ಲಿರುವ ಸಚಿವ ಎಂ ಬಿ ಪಾಟೀಲ್ ಅವರ ಮನೆಗೆ ಭೇಟಿ ನೀಡಿ, ಸಂಸ್ಥೆಯ 45ನೇ ವಾರ್ಷಿಕೋತ್ಸವ ಹಾಗೂ ಗುರುದೇವ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಪ್ರೀತಿಪೂರ್ವಕ ಆಹ್ವಾನ ನೀಡಿದರು.
ಕರ್ನಾಟಕ ಸೇರಿದಂತೆ ದೇಶದಾದ್ಯಂತ ಯುವಜನತೆ, ರೈತರು, ಮಹಿಳೆಯರು ಹಾಗೂ ಸಮಾಜದ ಎಲ್ಲ ವರ್ಗಗಳ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರಲು ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಸಲ್ಲಿಸಿರುವ ಕೊಡುಗೆ ಅನನ್ಯವಾಗಿದೆ. ಆಧ್ಯಾತ್ಮ, ಮಾನವೀಯತೆ, ಸೇವೆ ಮತ್ತು ಶಾಂತಿಯ ಸಂದೇಶವನ್ನು ವಿಶ್ವದ ಮೂಲೆಮೂಲೆಗೂ ತಲುಪಿಸಿರುವ ಗುರುದೇವರ ಹಾಗೂ ಸಂಸ್ಥೆಯ ಕಾರ್ಯ ನಿಜಕ್ಕೂ ಮಾದರಿಯಾಗಿದೆ. ಇದನ್ನೂ ಓದಿ: ಮೋದಿ ಹೇಳಿರೋದು ತಪ್ಪಾದರೆ ಇಂದಿರಾ ಗಾಂಧಿ ಹೇಳಿರುವುದು ಸರಿನಾ?” ಆರ್ ಅಶೋಕ್
ಗುರುದೇವ ಶ್ರೀ ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ ಹಾಗೂ ಸಂಸ್ಥೆಯ 45ನೇ ವಾರ್ಷಿಕೋತ್ಸವವು ವಿಶ್ವದಾದ್ಯಂತ ಶಾಂತಿ, ಸೌಹಾರ್ದತೆ ಮತ್ತು ಮಾನವೀಯತೆಯ ಸಂದೇಶವನ್ನು ಮತ್ತಷ್ಟು ಪ್ರಬಲವಾಗಿ ಸಾರಲಿ ಎಂದು ಹಾರೈಸಿದರು.
