Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮೀಸಲಾತಿ ಹೆಚ್ಚಳ ವಿಚಾರ: ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ಕೊಂಡೊಯ್ಯುವ ಭರವಸೆ ನೀಡಿದ ಸಿಎಂ
  • Bangalore
  • Politics
  • State

ಮೀಸಲಾತಿ ಹೆಚ್ಚಳ ವಿಚಾರ: ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ಕೊಂಡೊಯ್ಯುವ ಭರವಸೆ ನೀಡಿದ ಸಿಎಂ

Praja Vahini May 12, 2026 1 minute read
WhatsApp Image 2026-05-12 at 16.38.30
Spread the love

ಬೆಂಗಳೂರು: ಎಸ್ಸಿ, ಎಸ್ಟಿ, ಒಬಿಸಿ ಮೀಸಲಾತಿಯ ಗೊಂದಲ ಬಗೆಹರಿಸಲು ಜನಪ್ರತಿನಿಧಿಗಳ ಸಭೆ ಕರೆದು ತಕ್ಷಣ ಪ್ರಧಾನಿ ಹಾಗೂ ಕೇಂದ್ರ ಪರಿಶಿಷ್ಟ ಪಂಗಡ ಇಲಾಖೆ ಸಚಿವರನ್ನು ಭೇಟಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಕರ್ನಾಟಕ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯ ಅಧ್ಯಕ್ಷರಾದ ವಿ.ಎಸ್. ಉಗ್ರಪ್ಪನವರ ನೇತೃತ್ವದ ನಿಯೋಗದ ಜೊತೆಗೆ ಇಂದು (ಮಂಗಳವಾರ ಮೇ. 12) ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಶೇ. 56 ಮೀಸಲಾತಿ ಹೆಚ್ಚಳದ ವಿಚಾರಕ್ಕೆ ಈಗಾಗಲೇ ಕೇಂದ್ರಕ್ಕೆ ಪ್ರಸ್ತಾವನೆ ನೀಡಲಾಗಿದೆ ಎಂದರು.

ವಿ.ಎಸ್. ಉಗ್ರಪ್ಪನವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮೀಸಲಾತಿ ವಿಚಾರದ ಎಲ್ಲ ಗೊಂದಲಗಳನ್ನು ಎಳೆ ಎಳೆಯಾಗಿ ಬಿಡಿಸಿಟ್ಟರು. ತಳವಾರ, ಪರಿವಾರ ಸಮುದಾಯದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರಗಳನ್ನು ನೀಡಿದ್ದಾರೆ. ಈಗಾಗಲೇ ರಾಜ್ಯದಲ್ಲಿ 2,39,166 ಜನ ನಕಲಿ ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆ. ಉಡುಪಿ- ಕುಂದಾಪುರ ಒಂದರಲ್ಲೇ 500 ಕ್ಕೂ ಹೆಚ್ಚು ನಕಲಿ ಜಾತಿ ಪ್ರಮಾಣ ಪತ್ರಗಳು ವಿತರಣೆಯಾಗಿವೆ. ಸರ್ಕಾರದ ಸ್ಪಷ್ಟ ಆದೇಶ ಇದ್ದರೂ ನಕಲಿ ಜಾತಿಬಪ್ರಮಾಣ ಪತ್ರಗಳು ವಿತರಣೆಯಾಗುತ್ತಿರುವುದು ವಿಪರ್ಯಾಸ ಎಂದು ಮನವರಿಕೆ ಮಾಡಿಕೊಟ್ಟರು.

ರಾಜ್ಯ 4 ಕೋಟಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಒಬಿಸಿ ಜನರಿಗೆ ಮೀಸಲಾತಿ ವಿಚಾರದಲ್ಲಿ ಅನ್ಯಾಯವಾಗುತ್ತಿದೆ. ಕಲಂ‌ 343 ಅಡಿಯಲ್ಲಿ ರಾಜಕೀಯ ಮೀಸಲಾತಿ ನೀಡಿದ ಪರಿಣಾಮ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೀಸಲಾತಿ ದೊರೆತಿದೆ. ಇಂದಿರಾ ಸಾನಿ ಪ್ರಕರಣದಲ್ಲಿ ಸ್ಪಷ್ಟವಾಗಿ ಆದೇಶ ಇದ್ದರೂ ಕೂಡ ಮೀಸಲಾತಿ ಹೆಚ್ಚಳದ ವಿಚಾರದಲ್ಲಿ ಗೊಂದಲ ಸೃಷ್ಟಿ ಮಾಡಲಾಗುತ್ತಿದೆ. ವಾಲ್ಮೀಕಿ ಅಥವಾ ನಾಯಕ ಸಮುದಾಯದ ತಳವಾರ ಜನರನ್ನು ಹೊರತುಪಡಿಸಿ ಉಳಿದ ಜನಾಂಗದ ತಳವಾರ ಜನರನ್ನು ಒಬಿಸಿ ಅಡಿಯಲ್ಲಿ ಜಾತಿ ಪ್ರಮಾಣ ಪತ್ರ ನೀಡಬೇಕು. ಆದರೆ ಸರ್ಕಾರದ ಆದೇಶ ಉಲ್ಲಂಘನೆ ಮಾಡಿ ನಕಲಿ ಜಾತಿ ಪ್ರಮಾಣ ಪತ್ರ ನೀಡಲಾಗುತ್ತಿದೆ ಎಂದು ವಿ.ಎಸ್.ಉಗ್ರಪ್ಪ ವಿವರಿಸಿದರು.

2015 ರಲ್ಲಿ ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಿಸಲು ಹೈಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿ ವಿಚಾರಣೆ ಹಿನ್ನೆಲೆಯಲ್ಲಿ ಹೈಕೋರ್ಟ್ ರಿಟ್ ಅರ್ಜಿ ಸಂಖ್ಯೆ 16852/2015 ರಲ್ಲಿ ಮೀಸಲಾತಿ ಹೆಚ್ಚಳದ ಮನವಿ ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅದರಂತೆ ನ್ಯಾ. ನಾಗಮೋಹನ್ ದಾಸ್ ಆಯೋಗ ಹಾಗೂ ಸುಭಾಷ್ ಅಡಿ ಆಯೋಗ ರಚಿಸಿ ಆ ಆಯೋಗಗಳ ವರದಿ ಆಧಾರದಲ್ಲಿ ಪರಿಶಿಷ್ಟ ಜಾತಿಗೆ ಶೇ. 17% ಪರಿಶಿಷ್ಟ ಪಂಗಡಕ್ಕೆ ಶೇ.7% ಮೀಸಲಾತಿ ಹೆಚ್ಚಳ ಮಾಡಲಾಗಿದೆ‌. ಆದರೆ ಇದನ್ನು ಶೆಡ್ಯೂಲ್ 9 ಗೆ ಸೇರಿಸಿಲ್ಲ. ಇದರಿಂದ ಎಸ್ಸಿ ಎಸ್ಟಿ ಸಮಯದಾಯಗಳಿಗೆ ಅನ್ಯಾಯವಾಗುತ್ತಿದೆ. ಇದನ್ನೂ ಓದಿ: ರಾಜ್ಯದ ಆರು ಗ್ರಾಮ ಪಂಚಾಯತಿಗಳಿಗೆ ಕೇಂದ್ರದ ನಗದು ಪುರಸ್ಕಾರ: ಪ್ರಿಯಾಂಕ್ ಖರ್ಗೆ

ಹೀಗಾಗಿ ತಕ್ಷಣ ಸರ್ವಪಕ್ಷಗಳ ಸಭೆ ಕರೆಯಬೇಕು, ಸರ್ವಪಕ್ಷ ನಿಯೋಗ ತೆಗೆದುಕೊಂಡು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಬಂಧಿಸಿ ಸಚಿವರ ಬಳಿ ಕೊಂಡೊಯ್ಯಬೇಕು. ಹೈಕೋರ್ಟ್ ನಲ್ಲಿ ತಡೆಯಾಜ್ಞೆ ತೆರವುಗೊಳಿಸಲು ಸಮರ್ಥ ವಕೀಲರ ನೇಮಕ ಮಾಡಬೇಕು. ತಡೆಯಾಜ್ಞೆ ತೆರವುಗೊಳಿಸಲು ವಿಶೇಷ ಅರ್ಜಿ ಹಾಕಬೇಕು. ಒಂದು ವೇಳೆ ತಡೆಯಾಜ್ಞೆ ತೆರವಾಗದಿದ್ದರೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಿ ಈ ವಿಚಾರವಾಗಿ ತಳ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವವರಿಗೆ ಹಾಗೂ ನೀಡುವವರಿಗೆ ಶಿಕ್ಷೆಯಾಗಬೇಕು ಎಂದು ಉಗ್ರಪ್ಪ ಮನವಿ ಮಾಡಿದರು.

 

About the Author

Praja Vahini

Editor

View All Posts

Spread the love

Post navigation

Previous: ರಾಜ್ಯದ ಆರು ಗ್ರಾಮ ಪಂಚಾಯತಿಗಳಿಗೆ ಕೇಂದ್ರದ ನಗದು ಪುರಸ್ಕಾರ: ಪ್ರಿಯಾಂಕ್ ಖರ್ಗೆ
Next: ನೀಟ್‌ ಎನ್ನುವುದು ಕೇಂದ್ರ ಸರ್ಕಾರದ ಬಹುದೊಡ್ಡ ಹಗರಣವಾಗಿದೆ: ಶರಣಪ್ರಕಾಶ ಪಾಟೀಲ

Views:

36

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.