ಬೆಂಗಳೂರು: ಕನ್ನಡದ ಹಿಟ್ಲರ್ ಕಲ್ಯಾಣ ಧಾರವಾಹಿ ಮೂಲಕ ಇಡೀ ಕರ್ನಾಟಕದ ಮನೆ ಮಾತಾಗಿದ್ದ ನಟ ದಿಲೀಪ್ ರಾಜ್ ಅವರು ಇಂದು (ಬುಧವಾರ ಮೇ. 13) ಹೃದಯಘಾತದಿಂದ ನಿಧನರಾಗಿದ್ದಾರೆ.
ಬೆಳ್ಳಿತೆರೆ ಹಾಗೂ ಕಿರುತೆರೆಯಲ್ಲಿ ತಮ್ಮದೇ ಆದ ಹೆಸರು ಮಾಡಿದ್ದ ನಟ ದಿಲೀಪ್ ಅವರು ನಿರ್ಮಾಪಕರಾಗಿ ತಮ್ಮದೇ ಆದ ನಿರ್ಮಾಣ ಸಂಸ್ಥೆಯನ್ನು ಹೊಂದಿದ ಅವರು ಕರ್ನಾಟಕದ ಅದೆಷ್ಟೋ ಕಲಾವಿದರ ಬಾಳಿನ ಬೆಳಕಾಗಿದ್ದರು.
ಇನ್ನು ಅವರ ನಿರ್ಮಾಣ ಸಂಸ್ಥೆಯಲ್ಲಿ ಈಗಾಗಲೇ ಹಲವಾರು ಧಾರಾವಾಹಿಗಳು ಮೂಡಿ ಬಂದಿದ್ದು ಅದೆಷ್ಟೋ ಜನರಿಗೆ ಅನ್ನ ಹಾಕುತ್ತಿದ್ದ ದೊರೆ ಅಗಲಿದ್ದಾರೆ..
ಸಿನಿಮಾ ಮತ್ತು ಟಿವಿ ಎರಡರಲ್ಲೂ ನಟ, ನಿರ್ಮಾಪಕ ದಿಲೀಪ್ ರಾಜ್ ಗುರುತಿಸಿಕೊಂಡಿದ್ದರು. 2005ರಲ್ಲಿ ಬಿಡುಗಡೆಯಾದ ಬಾಯ್ಫ್ರೆಂಡ್ ಸಿನಿಮಾದಲ್ಲಿ ನಾಯಕನಾಗಿ ನಟಿಸುವ ಮೂಲಕ ಸಿನಿಮಾಗೆ ಎಂಟ್ರಿ ಕೊಟ್ಟಿದ್ದರು. ಮಿಲನ ಸಿನಿಮಾದಲ್ಲಿ ವಿಲನ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದರು.
ಸುಮಾರು 28 ಚಿತ್ರಗಳಲ್ಲಿ ದಿಲೀಪ್ ರಾಜ್ ನಟಿಸಿದ್ದಾರೆ. ಸದ್ಯ ಜನಪ್ರಿಯ ಧಾರಾವಾಹಿ ‘ಕೃಷ್ಣ ರುಕ್ಕು’ ಧಾರವಾಹಿ ಪ್ರೊಡ್ಯೂಸ್ ಮಾಡುತ್ತಿದ್ದರು. 47 ವರ್ಷದ ದಿಲೀಪ್ ರಾಜ್ ಕೊನೆಯದಾಗಿ ʼಲವ್ ಮಾಕ್ಟೇಲ್ 3ʼ ಸಿನಿಮಾದಲ್ಲಿ ನಟಿಸಿದ್ದರು. ಇದನ್ನೂ ಓದಿ: ನಾಗಿಣಿ ಸಂಸಾರದಲ್ಲಿ ಬಿರುಕು!
ಇಂದು ಬೆಳಗಿನ ಜಾವ ದಿಲೀಪ್ ರಾಜ್ಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಕೂಡ ಚಿಕಿತ್ಸೆಗೆ ಸ್ಪಂದಿಸದೇ ದಿಲೀಪ್ ರಾಜ್ ಕೊನೆಯುಸಿರೆಳೆದಿದ್ದಾರೆ.
