Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಮ್ಮ ಬೆಂಗಳೂರು – ನಮ್ಮ ಗ್ಯಾರಂಟಿ: ಡಿಕೆಶಿ
  • Bangalore
  • Politics
  • State

ನಮ್ಮ ಬೆಂಗಳೂರು – ನಮ್ಮ ಗ್ಯಾರಂಟಿ: ಡಿಕೆಶಿ

Praja Vahini May 13, 2026 1 minute read
WhatsApp Image 2026-05-13 at 15.35.51
Spread the love

ಬೆಂಗಳೂರು: ಬೆಂಗಳೂರು ನಗರದ ಇತಿಹಾಸದಲ್ಲಿ ಈವರೆಗೆ ಯಾರೂ ಇಂತಹ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಂಡಿಲ್ಲ. ನಮ್ಮ ಬೆಂಗಳೂರಿನ 23 ಲಕ್ಷ ಮನೆಗಳ ಆಸ್ತಿಗಳನ್ನು ಅಧಿಕೃತಗೊಳಿಸಿ, ಹಕ್ಕು ಪತ್ರಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ನಾವು ತೀರ್ಮಾನಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದರು.

ಇಂದು (ಬುಧವಾರ ಮೇ. 13) ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ 6ನೇ ಗ್ಯಾರಂಟಿ – ಭೂ ಗ್ಯಾರಂಟಿ ಹಾಗೂ ಬೆಂಗಳೂರಿಗೆ ಸಂಬಂಧಿಸಿದ ಹಲವಾರು ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವು ಆರನೇ ಗ್ಯಾರಂಟಿ ಅಂದರೆ ಭೂ ಗ್ಯಾರಂಟಿಯ ಯೋಜನೆಯ ಮೂಲಕ ಆಸ್ತಿ ದಾಖಲೆಗಳ ದುರುಪಯೋಗವನ್ನು ತಡೆಯಲು ಪ್ರತಿಯೊಂದು ಆಸ್ತಿಯ ಮ್ಯಾಪಿಂಗ್ ಮತ್ತು ವಿವಿಧ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಜನರಿಗೆ ಅವರ ಆಸ್ತಿ ದಾಖಲೆಗಳನ್ನು ಒದಗಿಸುತ್ತೇವೆ.

‘ನನ್ನ ಖಾತೆ – ನನ್ನ ಹಕ್ಕು’ ಅಭಿಯಾನವನ್ನು ನಾವು ಹಮ್ಮಿಕೊಂಡಿದ್ದೇವೆ. ಪ್ರಸ್ತುತ ನಗರದಲ್ಲಿ 7 ಲಕ್ಷ ಬಿ-ಖಾತೆಗಳಿದ್ದು, ಈ ಪೈಕಿ ಆರಂಭದಲ್ಲಿ ಬಂದ 11 ಸಾವಿರ ಅರ್ಜಿಗಳಲ್ಲಿ 7 ಸಾವಿರ ಅರ್ಜಿಗಳನ್ನು ವಿಲೇವಾರಿ ಮಾಡಿದ್ದೇವೆ. ಈಗ ಈ ಅಭಿಯಾನದ ಮೂಲಕ ಎಲ್ಲಾ 7 ಲಕ್ಷ ಜನರಿಗೂ ಅನುಕೂಲ ಮಾಡಿಕೊಡುವುದು ನಮ್ಮ ಗುರಿಯಾಗಿದೆ.

‘ನನ್ನ ಖಾತೆ – ನನ್ನ ಹಕ್ಕು’ ಅಭಿಯಾನವನ್ನು ಮೇ 16ರಿಂದ ಆರಂಭಿಸಿ ಸುಮಾರು ಮೂರು ತಿಂಗಳ ಕಾಲ ಪ್ರತಿ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ನಡೆಸಲಾಗುವುದು. ಒಂದು ಪಾಲಿಕೆಗೆ ಹತ್ತು ಸ್ಥಳಗಳಂತೆ ಒಟ್ಟು 50 ಜಾಗಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಎರಡನೇ ಮತ್ತು ನಾಲ್ಕನೇ ಶನಿವಾರ ರಜೆ ಇದ್ದರೂ ಸಹ ಅಧಿಕಾರಿಗಳು ಲಭ್ಯವಿದ್ದು ಕೆಲಸ ಮಾಡಲಿದ್ದಾರೆ. ಯಾರೊಬ್ಬರಿಂದಲೂ ರೂಪಾಯಿ ಲಂಚವಿಲ್ಲದೆ ಪಾರದರ್ಶಕವಾಗಿ ಮನೆ ಬಾಗಿಲಿಗೆ ಖಾತೆ ಒದಗಿಸಿಕೊಡುವುದೇ ನಮ್ಮ ಸಂಕಲ್ಪವಾಗಿದೆ ಎಂದರು.

ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತಿಸಿಕೊಳ್ಳುವವರಿಗೆ ನಾವು ದೊಡ್ಡ ರಿಯಾಯಿತಿಯನ್ನು ಘೋಷಿಸಿದ್ದೇವೆ. ಸಾಮಾನ್ಯವಾಗಿ ಇದಕ್ಕೆ ಶೇ. 5ರಷ್ಟು ಗೈಡೆನ್ಸ್ ವ್ಯಾಲ್ಯೂ ಶುಲ್ಕವಿರುತ್ತದೆ. ಆದರೆ ನೂರು ದಿನದೊಳಗೆ ಅರ್ಜಿ ಸಲ್ಲಿಸುವವರಿಗೆ ಕೇವಲ ಶೇ. 2ರಷ್ಟು ಶುಲ್ಕವನ್ನು ಮಾತ್ರ ನಿಗದಿಪಡಿಸಿದ್ದೇವೆ.

ಆಡಳಿತಾತ್ಮಕ ಸುಧಾರಣೆಗಳ ಜೊತೆಗೆ ‘ಗ್ರೀನ್ ಬೆಂಗಳೂರು’ ನಿರ್ಮಾಣಕ್ಕೂ ನಾವು ಒತ್ತು ನೀಡಿದ್ದೇವೆ. ಈ ನಿಟ್ಟಿನಲ್ಲಿ ಕೆಂಪೇಗೌಡ ಜಯಂತಿಯ ಅಂಗವಾಗಿ ಜೂನ್ 27ರಂದು ಶಾಲೆಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಗರದಾದ್ಯಂತ 15 ಲಕ್ಷ ಸಸಿಗಳನ್ನು ನೆಡಲು ತೀರ್ಮಾನಿಸಿದ್ದೇವೆ. ಆ ಮೂಲಕ ಬೆಂಗಳೂರನ್ನು ಮತ್ತೆ ಹಸಿರು ನಗರವನ್ನಾಗಿ ಮಾಡುವತ್ತ ಹೆಜ್ಜೆ ಇಟ್ಟಿದ್ದೇವೆ. ಇದನ್ನೂ ಓದಿ: ನಟ ದಿಲೀಪ್ ರಾಜ್ ಹೃದಯದಿಂದ ನಿಧನ

ಈ ವೇಳೆ ಸಚಿವರಾದ ಕೆ.ಜೆ. ಜಾರ್ಜ್, ಬಿಡಿಎ ಅಧ್ಯಕ್ಷರು ಹಾಗೂ ಶಾಸಕರಾದ ಎನ್‌.ಎ. ಹ್ಯಾರಿಸ್, ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಶಾಸಕರಾದ ಎ.ಸಿ.ಶ್ರೀನಿವಾಸ್ ಹಾಗೂ ಪರಿಷತ್ ಸದಸ್ಯರಾದ ಕೆ.ಗೋವಿಂದರಾಜ್ ಅವರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ
Next: ಬಿಬಿಸಿ -ನಬಾರ್ಡ್‌ ಎಫ್‌ಪಿಒ ಮತ್ತು ಸ್ಟಾರ್ಟ್‌ಅಪ್ ಸಮಾವೇಶ

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.