ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು (ಶುಕ್ರವಾರ ಮೇ 15) 64ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದು, ಡಿಕೆ ಶಿವಕುಮಾರ್ ಅವರ ಅಭಿಮಾನಿಗಳು ಸೇರಿದಂತೆ ರಾಜಕೀಯ ಘಟಾನುಘಟಿ ನಾಯಕರು ಕೂಡ ಡಿಕೆ ಶಿವಕುಮಾರ್ ಅವರಿಗೆ ಹುಟ್ಟು ಹಬ್ಬದ ಶುಭ ಕೋರಿದ್ದಾರೆ ಅಲ್ಲದೆ
ಅಲ್ಲದೆ ಇಂದು ಮುಂಜಾನೆಯೇ ಡಿಸಿಎಂ ಮನೆ ಮುಂದೆ ಆಗಮಿಸಿದ ವೇದ ವಿದ್ವಾಂಸರು ಹಾಗೂ ಋತ್ವಿಕರು ಮನ್ಯುಸೂಕ್ತ ಮಂತ್ರಗಳ ಪಠಣದೊಂದಿಗೆ, ವೇದಘೋಷದೊಂದಿಗೆ ಡಿ ಕೆ ಶಿವಕುಮಾರ್ ಅವರಿಗೆ ಆಯುಷ್ಯ ಮತ್ತು ಅಧಿಕಾರ ಪ್ರಾಪ್ತಿಯಾಗಲೆಂದು ಹರಸಿದ್ದಾರೆ. ನೂರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಕೇಕ್ ಕತ್ತರಿಸಿದ ಅವರು, ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ. ಇದನ್ನೂ ಓದಿ: ಬೆಲೆ ಏರಿಕೆ ಮೋದಿ ಅವರ ಕೊಡುಗೆ: ಡಿಕೆಶಿ
