ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್ ದೇಶದಲ್ಲಿ ಡೀಸೆಲ್, ಪೆಟ್ರೋಲ್ ದರ ಏರಿಕೆ ಆಗಿರುವ ಬೆನ್ನಲ್ಲೇ ಇದೀಗ ಖಾಸಗಿ ಬಸ್‌ಗಳ ಟಿಕೆಟ್ ದರ ಕೂಡ ಹೆಚ್ಚಳ ಮಾಡಲಾಗುತ್ತಿದೆ.
ಹೌದು, ರಾಜ್ಯದಲ್ಲಿ ಡೀಸೆಲ್, ಪೆಟ್ರೋಲ್ ದರ ಏರಿಕೆ ಆಗಿರುವ ಬೆನ್ನೆಲೆ ಇದೀಗ ಖಾಸಗಿ ಬಸ್‌ಗಳ ಟಿಕೆಟ್ ದರವನ್ನು ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ.
ಈ ಕುರಿತು ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘ ಮಾಹಿತಿ ನೀಡಿದೆ. 20ರಿಂದ 30% ದರ ಏರಿಕೆ ಮಾಡಲಾಗಿದ್ದು, ಪ್ರತಿದಿನ ಖಾಸಗಿ ಬಸ್ ಮಾಲೀಕರು ಕನಿಷ್ಠ 150 ಲೀಟರ್ ಆಯಿಲ್ ಹಾಕಿಸಿಕೊಳ್ಳಬೇಕು. ನಮಗೆ ಪ್ರತಿ ಟ್ರಿಪ್‌ಗೆ ಹೆಚ್ಚುವರಿಯಾಗಿ 450 ರೂ. ಅಂದರೆ ಹೊರೆ ಆಗಲಿದೆ. ಹೀಗಾಗಿ ಅನಿವಾರ್ಯವಾಗಿ ದರ ಏರಿಕೆ ಮಾಡುತ್ತಿದ್ದೇವೆ. ಇದರ ಪರಿಣಾಮ ಪ್ರಯಾಣಿಕರ ಮೇಲೆ ಬೀಳಲಿದೆ ಎಂದಿದೆ. ಇದನ್ನೂ ಓದಿ: ದರ್ಶನ್ ಗೆ ಇನ್ನೂ ಒಂದು ವರ್ಷ ಇಲ್ಲ ಬಿಡುಗಡೆ ಭಾಗ್ಯ!?
ಅಲ್ಲದೆ ಕರ್ನಾಟಕ ರಾಜ್ಯ ಖಾಸಗಿ ಶಾಲಾ ವಾಹನಗಳ ಯುನಿಯನ್ ಅಧ್ಯಕ್ಷ ರವಿಕುಮಾರ್ ಮಾತನಾಡಿ, ಸ್ಕೂಲ್ ವಾಹನಗಳ ದರ 10% ವರೆಗೆ ಏರಿಕೆ ಮಾಡಿದ್ದಾಗಿ ತಿಳಿಸಿದ್ದಾರೆ. ಇದರ ಜೊತೆಗೆ ರಾಜ್ಯ ಟ್ರ್ಯಾವೆಲ್ ಪಾಸೆಂಜರ್ ವಾಹನಗಳ ದರವೂ 10%-15%ನಷ್ಟು ಏರಿಕೆಯಾಗಲಿದೆ.
