ಬೆಂಗಳೂರು: ಬೆಂಗಳೂರು ನಗರದಲ್ಲಿ ವಾಸಿಸುವ ಜನರು ತಮ್ಮ ದಿನನಿತ್ಯದ ಪ್ರಯಾಣವನ್ನು ಸುಮಾರು 50% ಕ್ಕಿಂತ ಹೆಚ್ಚು ಜನ ಮೆಟ್ರೋ ಬಳಸಿ ಪ್ರಯಾಣಿಸುತ್ತಾರೆ.
ಹೌದು, ಬೆಂಗಳೂರಿನಲ್ಲಿರುವ ಟ್ರಾಫಿಕ್ ಸಮಸ್ಯೆಯಿಂದ ಜನರು ನಮ್ಮ ಮೆಟ್ರೋ ಬಳಸಿ ತಮ್ಮ ಕೆಲಸ ಕಾರ್ಯಗಳಿಗೆ ಹೇಳುತ್ತಾರೆ. ಆದರೆ ಮೇ 17 ಅಂದ್ರೆ ಭಾನುವಾರ ಸುಮಾರು 2 ಗಂಟೆಗಳ ವರೆಗೆ ನೇರಳೆ ಬಣ್ಣದ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಪ್ರಮುಖ ಪ್ರಕಟಣೆ ಹೊರಡಿಸಿದೆ.
ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಭಾನುವಾರ ಬೆಳಿಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ನೆರಳ ಮಾರ್ಗದ ಕೆಲವು ಮೆಟ್ರೋ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಪ್ರಕಟಣೆ ಹೊರಡಿಸಿದೆ.
ನಾಡಪ್ರಭು ಕೆಂಪೇಗೌಡ ನಿಲ್ದಾಣ ಮತ್ತು ಸರ್. ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣಗಳ (ಸೆಂಟ್ರಲ್ ಕಾಲೇಜ್) ನಡುವೆ ಅತ್ಯಗತ್ಯ ನಿರ್ವಹಣಾ ಕಾಮಗಾರಿ ನಡೆಯಲಿದೆ. ಈ ಕಾರಣದಿಂದಾಗಿ, ಭಾನುವಾರ ಬೆಳಗ್ಗೆ 07 ಗಂಟೆಯಿಂದ 09 ಗಂಟೆಯವರೆಗೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ (ಹೊಸಹಳ್ಳಿ) ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಂಚಾರ ಇರುವುದಿಲ್ಲ. ಇದನ್ನೂ ಓದಿ: ಪ್ರಯಾಣಿಕರ ಜೇಬಿಗೆ ಕತ್ತರಿ; ಖಾಸಗಿ ಬಸ್ ಟಿಕೆಟ್ ದರ ಏರಿಕೆ
ಇನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಬೆಳಗ್ಗೆ 07 ಗಂಟೆಯಿಂದ 09 ಗಂಟೆ ಅವಧಿಯಲ್ಲಿ ಎಂದಿನಂತೆ ಮೆಟ್ರೋ ರೈಲುಗಳು ನಿಯಮಿತ ವೇಳಾಪಟ್ಟಿಯಂತೆ ಸಂಚರಿಸಲಿವೆ. ಚಲ್ಲಘಟ್ಟ – ವಿಜಯನಗರ, ಎಂ.ಜಿ. ರಸ್ತೆ – ವೈಟ್ ಫೀಲ್ಡ್, ಕಾಡುಗೋಡಿ, ಮಾದಾವರ – ಸಿಲ್ಕ್ ಇನ್‌ಸ್ಟಿಟ್ಯೂಟ್, ಆರ್.ವಿ. ರಸ್ತೆ – ಬೊಮ್ಮಸಂದ್ರ ಈ ಮೆಟ್ರೋ ನಿಲ್ದಾಣಗಳಲ್ಲಿ ಎಂದಿನಂತೆ ಮೆಟ್ರೋ ಸಂಚರಿಸಲಿದೆ.
ಭಾನುವಾರ ಬೆಳಗ್ಗೆ 09 ಗಂಟೆಯ ನಂತರ ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳ ನಡುವೆ ಹಾಗೂ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳು ಎಂದಿನಂತೆ ಪುನಃ ಆರಂಭಗೊಳ್ಳಲಿವೆ.
