ಬೆಂಗಳೂರು: ರಾಜ್ಯದ ರಾಜಧಾನಿ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೌದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲೂ ಕೂಡ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ರಾಜ್ಯದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಪ್ರದೇಶದ ಬಹುತೇಕ ಕಡೆ ಗುಡುಗು ಮಿಂಚು ಸಹಿತ ಜೋರು ಮಳೆಯಯಾಗಲಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಎಂದು ಇಲಾಖೆ ವರದಿ ಮಾಡಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಡಿಕೆಶಿ ಮುಂದಿನ ಸಿಎಂ ಬ್ಯಾನರ್ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು?
ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
