Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಚಿವ ಜಮೀರ್ ಅಹ್ಮದ್ ಖಾನ್‌ಗೆ ಎದುರಾಯಿತು ಮತ್ತೊಂದು ಸಂಕಷ್ಟ!
  • Bangalore
  • Crime
  • Politics
  • State

ಸಚಿವ ಜಮೀರ್ ಅಹ್ಮದ್ ಖಾನ್‌ಗೆ ಎದುರಾಯಿತು ಮತ್ತೊಂದು ಸಂಕಷ್ಟ!

Praja Vahini May 16, 2026 1 minute read
WhatsApp Image 2026-05-16 at 13.01.22
Spread the love

ಬೆಂಗಳೂರು: ರಾಜ್ಯದಲ್ಲಿ ಬಹು ದೊಡ್ಡ ಹಗರಣ ಒಂದು ನಡೆದಿದ್ದು, ಸಚಿವ ಜಮೀರ್ ಅಹ್ಮದ್ ಖಾನ್ ಗೆ ಸಂಬಂಧಿಸಿದ ನ್ಯಾಷನಲ್ ಟ್ರಾವೆಲ್ಸ್ ಗೆ ನೋಟಿಸ್ ನೀಡಲಾಗಿದೆ.

ಹೌದು, ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಸುಮಾರು 2000 ಕೋಟಿ ಬೃಹತ್ ನಕಲಿ ಐಸಿಟಿ ವಂಚನೆ ಜಾಲವನ್ನು ಇದೀಗ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಜ್ಯದ ಜನತೆ ದಂಗಾಗಿದ್ದಾರೆ. ನಕಲಿ ಬಿಲ್‌ಗಳ ಸಾಗಾಟಕ್ಕೆ ನ್ಯಾಷನಲ್ ಟ್ರಾವೆಲ್ಸ್‌ನ ಲಾರಿಗಳನ್ನು ಬಳಸಿಕೊಳ್ಳಲಾದ ಆರೋಪದ ಮೇಲೆ ಈ ನೋಟಿಸ್ ನೀಡಲಾಗಿದೆ.

ಬೆಂಗಳೂರಿನಲ್ಲಿ ಟಂಗ್‌ಸ್ಟನ್ ಸ್ಕ್ರ್ಯಾಪ್ ಅಷ್ಟಾಗಿ ಸಿಗದೇ ಇದ್ದರೂ, ಇಲ್ಲಿಂದ ದೊಡ್ಡ ಪ್ರಮಾಣದಲ್ಲಿ ರಫ್ತಾಗಿರುವ ದಾಖಲೆಗಳು ಸೃಷ್ಟಿಯಾಗಿದ್ದವು. ಸುಮಾರು 217 ಕೋಟಿ ರೂ. ವಹಿವಾಟು ನಡೆಸಿ, 39 ಕೋಟಿ ರೂ. ತೆರಿಗೆ ಬಿಲ್ ಸೃಷ್ಟಿಸಿದ್ದನ್ನು ಗಮನಿಸಿದ ವಾಣಿಜ್ಯ ತೆರಿಗೆ ಅಧಿಕಾರಿಗಳು ಇದರ ಬೆನ್ನುಬಿದ್ದಾಗ ಇಡೀ ನೆಟ್‌ವರ್ಕ್ ಬಯಲಾಗಿದೆ.

ಈ ಜಾಲಕ್ಕೆ ಸಂಬಂಧಿಸಿದಂತೆ ಜನವರಿಯಲ್ಲಿ ಐವರನ್ನು ಬಂಧಿಸಲಾಗಿತ್ತು. ಸದ್ಯ ತನಿಖೆ ಮುಂದುವರಿಸಿರುವ ಅಧಿಕಾರಿಗಳು ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ‘ಎಸ್‌ಕೆಎಸ್ ಟ್ರೇಡರ್ಸ್’ನ ಸಲೀಮುಲ್ಲಾ ಹಾಗೂ ‘ಕೆಎಚ್ ಇ-ವೇಸ್ಟ್ ಸೈಕ್ಲರ್’ನ ಹಸನ್ ಬೇಗ್ ಬಂಧಿತರು. ಈ 2 ಸಂಸ್ಥೆಗಳು ಬರೋಬ್ಬರಿ 2,384 ಕೋಟಿ ರೂ. ವಹಿವಾಟು ನಡೆಸಿ, 594 ಕೋಟಿ ರೂ. ಐಟಿಸಿ ಬಿಲ್ ಪಡೆದಿರುವುದು ದೃಢಪಟ್ಟಿದೆ. ಅದರಲ್ಲಿಯೂ ಎಸ್‌ಕೆಎಸ್ ಟ್ರೇಡರ್ಸ್‌ನ ವಹಿವಾಟು ಕೇವಲ 3 ವರ್ಷಗಳಲ್ಲಿ 50 ಕೋಟಿಯಿಂದ 945 ಕೋಟಿ ರೂ.ಗೆ ಏರಿಕೆಯಾಗಿತ್ತು. ಇದನ್ನೂ ಓದಿ:  ಸಿಲಿಕಾನ್ ಸಿಟಿ ಸೇರಿ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಆದರೆ ಈ ಸಂಸ್ಥೆಗಳಲ್ಲಿ ಯಾವುದೇ ಸರಕು ಸಾಗಾಟವಾಗಲಿ ಅಥವಾ ವ್ಯಕ್ತಿಗಳಾಗಲಿ ಇರಲಿಲ್ಲ. ಒಟ್ಟಾರೆ ತನಿಖೆಯಲ್ಲಿ ಇಂತಹ 127 ನಕಲಿ ಸಂಸ್ಥೆಗಳ ಬೃಹತ್ ಜಾಲ ಪತ್ತೆಯಾಗಿದ್ದು, ಸದ್ಯ ಕೋರ್ಟ್‌ ಆದೇಶದ ಮೇರೆಗೆ 7 ಜನರನ್ನು ಬಂಧಿಸಿ ತನಿಖೆ ಮುಂದುವರಿಸಲಾಗಿದೆ.

About the Author

Praja Vahini

Editor

View All Posts

Spread the love

Post navigation

Previous: ಸಿಲಿಕಾನ್ ಸಿಟಿ ಸೇರಿ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
Next: ಇತಿಹಾಸ ಅರಿಯದೆ ಹೋದರೆ ಸಮಾಜದ ಅಂಕುಡೊಂಕುಗಳನ್ನು ಅರಿಯಲು ಸಾಧ್ಯವಿಲ್ಲ: ಸಿಎಂ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.