ವಿಜಯಪುರ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ಈ ಬಾರಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಕ್ರೀಡಾಕೂಟವನ್ನು ವಿಜಯಪುರದಲ್ಲಿ ಆಯೋಜಿಸಲಾಗಿದ್ದು ರಾಜ್ಯಮಟ್ಟದ ಬ್ಯಾಡ್ಮಿಂಟನ್‌ಗೆ ವಿಜಯಪುರ ಸಜ್ಜಗಿದೆ.
ಹೌದು, ಮೇ 17ರಿಂದ 23ರವರೆಗೆ ವಿಜಯಪುರ ನಗರದ BLDE ಒಳಾಂಗಣ ಕ್ರೀಡಾಂಗಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಒಳಾಂಗಣ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ ಆಯೋಜಿಸಲಾಗಿದ್ದು, ಇಂದು (ಶನಿವಾರ ಮೇ 16) ಸಚಿವ ಎಂ ಬಿ ಪಾಟೀಲ್ ಅವರು, ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಕುಮಾರ್ ಬಂಗಾರಪ್ಪ ಅವರೊಂದಿಗೆ BLDE ಆವರಣದಲ್ಲಿನ ಬ್ಯಾಡ್ಮಿಂಟನ್ ಕ್ರೀಡಾಂಗಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಒಳಾಂಗಣ ಕ್ರೀಡಾಂಗಣಕ್ಕೆ ಭೇಟಿನೀಡಿ, ಅಂತಿಮ ಹಂತದ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿ, ಅಗತ್ಯ ಸೂಚನೆಗಳನ್ನು ನೀಡಿದರು. ಇದನ್ನೂ ಓದಿ: ಮೋದಿ ಕರೆಗೆ ಸ್ಪಂದಿಸಿ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದ ವಿಜಯೇಂದ್ರ
ಇನ್ನು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಜರುಗಲಿರುವ ಈ ಪಂದ್ಯಾವಳಿಯಲ್ಲಿ 15ರಿಂದ 17 ವರ್ಷದೊಳಗಿನ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ.
ಈ ರಾಜ್ಯ ಮಟ್ಟದ ಕ್ರೀಡಾಕೂಟವು ಯುವ ಪ್ರತಿಭೆಗಳಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ವೇದಿಕೆಯಾಗಲಿ ಎಂದರು.
