Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ: ಶರಣಪ್ರಕಾಶ ಪಾಟೀಲ್‌
  • Bangalore
  • Politics
  • State

ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ: ಶರಣಪ್ರಕಾಶ ಪಾಟೀಲ್‌

Praja Vahini May 16, 2026
WhatsApp Image 2026-05-16 at 16.11.25
Spread the love

ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ   ಹೆಚ್ಚುವರಿ 1122 ಸೀಟುಗಳು ದೊರೆಯಲಿವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಶನಿವಾರ ಮೇ 16ರಂದು ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದ ಅವರು, ನಮ್ಮ ರಾಜ್ಯ ವೈದ್ಯಕೀಯ ಕ್ಷೇತ್ರದಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದರು.

ರಾಜ್ಯಕ್ಕೆ ದೊರೆತಿರುವ ಹೆಚ್ಚುವರಿ ಸೀಟುಗಳು ಕೊಪ್ಪಳ, ಗದಗ, ಚಾಮರಾಜನಗರ, ಕಾರವಾರ, ಕಾವೇರಿ ಸೇರಿ ಇತರೆ ಜಿಲ್ಲೆಗಳಿಗೆ ದೊರೆಯಲಿದೆ ಎಂದು ತಿಳಿಸಿದರು.

ಪದವಿಪೂರ್ವ ಸೀಟುಗಳಿಗೆ ಕೇಂದ್ರ ಸರ್ಕಾರದಿಂದ 495 ಕೋಟಿ ರೂ. ಅನುದಾನ ಸಿಗಲಿದೆ. ಅದೇ ರೀತಿ ಸ್ನಾತಕೋತ್ತರ ವೈದ್ಯಕೀಯ ಸೀಟುಗಳಿಗೆ 541 ಕೋಟಿ ರೂಪಾಯಿ ಅನುದಾನ ಸಿಗಲಿದೆ ಎಂದು ಡಾ. ಪಾಟೀಲ್‌ ವಿವರಿಸಿದರು. ಕೇಂದ್ರ ಮತ್ತು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯು ಮೇ 15ರಂದು ಅಂತಿಮ ಮುದ್ರೆ ಹಾಕಿದೆ. ಒಟ್ಟಾರೆಯಾಗಿ ರಾಜ್ಯಕ್ಕೆ 1090 ಕೋಟಿ ರೂಪಾಯಿ  ದೊರೆಯಲಿದೆ ಎಂದು ಹೇಳಿದರು.

ಒಂದು ಸಾವಿರ ಮೆಡಿಕಲ್‌ ಸೀಟ್‌ ಒಂದು ರಾಜ್ಯಕ್ಕೆ ಸಿಕ್ಕಿರುವುದು ದಾಖಲೆಯಾಗಿದೆ. ಕರ್ನಾಟಕದ ಸಾಧನೆಗೆ ಇದು ಪೂರಕವಾದ ಸಾಕ್ಷಿಯಾಗಿದೆ ಎಂದು ಡಾ. ಪಾಟೀಲ್‌ ಹೇಳಿದರು. ಇದನ್ನೂ ಓದಿ: ಬದುಕು ತ್ಯಜಿಸುವುದು ಅಮೃತ್ ಕಾಲ್ ಅಂತರೆ ಮೋದಿ: ಪ್ರಿಯಾಂಕ ಖರ್ಗೆ

ವೈದ್ಯ ಕ್ಷೇತ್ರದಲ್ಲಿ ಸಾಧನೆ ಮಾಡುವವರಿಗೆ ಅತಿ ಹೆಚ್ಚು ಸಾಧನೆ ಮಾಡಲು ಕರ್ನಾಟಕದಲ್ಲಿ ಈಗ ವಿಫುಲ ಅವಕಾಶಗಳು ದೊರೆತಂತಾಗುತ್ತದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಡಾ. ಶರಣಪ್ರಕಾಶ ಪಾಟೀಲ್ ಸಲಹೆ ನೀಡಿದರು.

About the Author

Praja Vahini

Editor

View All Posts

Spread the love

Post navigation

Previous: ಬದುಕು ತ್ಯಜಿಸುವುದು ಅಮೃತ್ ಕಾಲ್ ಅಂತರೆ ಮೋದಿ: ಪ್ರಿಯಾಂಕ ಖರ್ಗೆ
Next: 50 ಲಕ್ಷ ರೂ. ವೆಚ್ಚದಲ್ಲಿಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.