ಬೆಂಗಳೂರು: ಹಟ್ಟಿ ಚಿನ್ನದ ಗಣಿ ಕಂಪನಿ 2025-26ನೇ ಸಾಲಿನಲ್ಲಿ 1,691.50 ಕೆ.ಜಿ ಚಿನ್ನ ಉತ್ಪಾದಿಸಿ, ಇದೇ ಮೊದಲ ಬಾರಿಗೆ ರೂ.1,910 ಕೋಟಿ ವಹಿವಾಟು ನಡೆಸಿ, ರೂ.844 ಕೋಟಿ ನಿವ್ವಳ ಲಾಭ ಗಳಿಸಿದ ಹಿನ್ನೆಲೆಯಲ್ಲಿ ಹಟ್ಟಿ ಚಿನ್ನದ ಗಣಿ ಕಂಪನಿಯ ಅಧ್ಯಕ್ಷರಾದ ಜೆ.ಟಿ ಪಾಟೀಲ ಅವರು ಇಂದು (ಶನಿವಾರ ಮೇ. 16) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿಯಾಗಿ ಅಭಿನಂದಿಸಿ, ಸನ್ಮಾನಿಸಿದರು.
ಈ ಸಂರ್ಭದಲ್ಲಿ ಗೃಹ ಸಚಿವರಾದ ಜಿ.ಪರಮೇಶ್ವರ, ಹಟ್ಟಿ ಚಿನ್ನದ ಗಣಿಯ ವ್ಯವಸ್ಥಾಪಕ ನಿರ್ದೇಶಕಿಯಾದ ಆರ್.ಶಿಲ್ಪ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: 50 ಲಕ್ಷ ರೂ. ವೆಚ್ಚದಲ್ಲಿಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
