ದೆಹಲಿ: ದೆಹಲಿಯ ರಾಮಕೃಷ್ಣ ಆಶ್ರಮದಲ್ಲಿ ಜರುಗಿದ ಭಾರತೀಯ ಸಂತ ಮಹಾ ಪರಿಷತ್ತಿನ ಐತಿಹಾಸಿಕ ಗ್ಲೋಬಲ್ ಸಂತ ಸಮ್ಮೇಳನದಲ್ಲಿ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಪಾಲ್ಗೊಂಡಿದ್ದರು.
ಕುಂಚಿಟಿಗ ಗುರುಪೀಠದ ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ, ಕನಕಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಯಾದವ ಗುರುಪೀಠದ ಜಗದ್ಗುರು ಶ್ರೀ ಕೃಷ್ಣಯಾದವಾನಂದ ಸ್ವಾಮೀಜಿ,ಆದಿಚುಂಚನಗಿರಿಮಠದ ಜಗದ್ಗುರು ನಿರ್ಮಲಾನಂದನಾಥ ಸ್ವಾಮೀಜಿ, ಶ್ರೀ ಬೆಂಗಳೂರು ಕೈಲಾಸ ಆಶ್ರಮದ ಜಗದ್ಗುರು ಶ್ರೀ ಜಯೇಂದ್ರಪುರಿ ಸ್ವಾಮೀಜಿ, ಉಡುಪಿ ಅಷ್ಟಮಠಗಳ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ. ಹಾಗೂ ಭಾರತ ದೇಶದ ವಿವಿಧ ಮತ ಪಂಥ ಸಂಪ್ರಾದಯಗಳ ಮಠಾಧಿಪತಿಗಳು ಭಾಗವಹಿಸಿದ್ದರು. ಇದನ್ನೂ ಓದಿ: ನಮ್ಮ ಸರ್ಕಾರ ಕೃಷಿ ಕ್ಷೇತ್ರಕ್ಕೆ ಹೊಸ ಚೈತನ್ಯ ನೀಡಲು ಬದ್ದವಾಗಿದೆ: ಚಲುವರಾಯಸ್ವಾಮಿ
