ತುಮಕೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇದೀಗ ಮೂರು ವರ್ಷಗಳನ್ನು ಪೂರೈಸಿದೆ. ಈ ಮೂರು ವರ್ಷಗಳ ಅವಧಿಯಲ್ಲಿ ಸರ್ಕಾರ ಹಲವು ಜನಪರ ಯೋಜನೆಗಳು, ಗ್ಯಾರಂಟಿ ಯೋಜನೆಗಳು ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಜಾರಿಗೆ ತಂದು ಜನರ ಮೆಚ್ಚುಗೆ ಪಡೆದಿದೆ.
ಹೌದು, ರಾಜ್ಯ ಕಾಂಗ್ರೆಸ್ ಸರ್ಕಾರದ 3ನೇ ವರ್ಷದ ಭವ್ಯ ಸಾಧನಾ ಸಮಾವೇಶವನ್ನು ಇಂದು (ಮಂಳವಾರ ಮೇ 19) ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ಕಾರ್ಯಕ್ರಮ ನೆರವೇರಲಿದೆ.
ಈ ಮಹಾವೇದಿಕೆಯಲ್ಲಿ ಜಿಲ್ಲೆಯ 1.52 ಲಕ್ಷ ಫಲಾನುಭವಿಗಳಿಗೆ ಇ-ಖಾತಾ, ಹಕ್ಕುಪತ್ರ ಹಾಗೂ ನಿವೇಶನ ಪತ್ರಗಳು ಸೇರಿದಂತೆ ವಿವಿಧ ಸವಲತ್ತುಗಳನ್ನು ವಿತರಿಸಲಾಗುತ್ತಿದೆ. ಜೊತೆಗೆ, 600 ಅಂಗನವಾಡಿ ಕಾರ್ಯಕರ್ತೆಯರಿಗೆ ನೇಮಕಾತಿ ಆದೇಶ ಪತ್ರ ಹಾಗೂ 687 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಲಿದೆ. ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರಕ್ಕೆ ಮಣಿಯುತ್ತ ಸರ್ಕಾರ?
ಇನ್ನು ಈ ಸಮಾವೇಶದಲ್ಲಿ ಸರಿ ಸುಮಾರು 2 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, 3 ಸಾವಿರಕ್ಕೂ ಹೆಚ್ಚು ಬಸ್ಗಳು ಹಾಗೂ ಎಲ್ಲರಿಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ.
